ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಎಲ್ಲ ಬ್ಯಾಂಕುಗಳಿಗೆ ಜೂನ್ ತಿಂಗಳ ಅಂತ್ಯದೊಳಗೆ ಅಗತ್ಯವಿರುವಷ್ಟು ಹೆಚ್ಚುವರಿ ಬಂಡವಾಳ ನೆರವು ಒದಗಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

`ಮೇ ತಿಂಗಳ ಅಂತ್ಯದೊಳಗೆ ಎಷ್ಟು ಬ್ಯಾಂಕುಗಳಿಗೆ ಹೆಚ್ಚುವರಿ ಬಂಡವಾಳ ಬೇಕಿದೆ ಎನ್ನುವುದರ ಸ್ಪಷ್ಟ ಚಿತ್ರಣ ಲಭಿಸಲಿದೆ~ ಎಂದು ಹಣಕಾಸು ಸೇವೆಗಳ ಕಾರ್ಯದರ್ಶಿ ಡಿ.ಕೆ.ಮಿತ್ತಲ್ ಇಲ್ಲಿ ನಡೆದ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಸಭೆಯಲ್ಲಿ ಹೇಳಿದರು.

ಮೊದಲ ಹಂತದ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಶೇ 9ರಷ್ಟು ಬಂಡವಾಳ ಮಟ್ಟ ಹೊಂದುವಂತೆ ಸೂಚಿಸಲಾಗಿದೆ. ಭಾರತೀಯ ಸ್ಟೇಟ್ ಬ್ಯಾಂಕ್ಗೆ (ಎಸ್ಬಿಐ) ಶೇ 11ರಷ್ಟು ಬಂಡವಾಳ ಶ್ರೇಣಿ ನಿಗದಿಪಡಿಸಲಾಗಿದೆ ಎಂದು ಮಿತ್ತಲ್ ತಿಳಿಸಿದರು.

ಪ್ರಸಕ್ತ ಬಜೆಟ್ನಲ್ಲಿ, ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ರೂ.14,588 ಕೋಟಿ ಬಂಡವಾಳ ನೆರವು ಒದಗಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಿತ್ತಲ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.