ಭಾನುವಾರ, ಮೇ 9, 2021
26 °C

ಜೆಎನ್‌ಯು ಕನ್ನಡ ಪೀಠ: ಅಗತ್ಯ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ಕನ್ನಡ ಅಧ್ಯಯನ ಪೀಠ ಆರಂಭಿಸಲು ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ ಆಸಕ್ತಿ ತೋರಿದ್ದು, ವಿ.ವಿ.ಗೆ ಅಗತ್ಯ ಸಹಕಾರ ನೀಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಿದ್ಧವಿದೆ ಎಂದು ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ತಿಳಿಸಿದರು.`ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನ ದೊರೆತಿರುವ ಕಾರಣ ಭಾಷೆಗೆ ಸಂಬಂಧಿಸಿದ ಯೋಜನೆಗೆ ಕೇಂದ್ರ ಸರ್ಕಾರ 1.5 ಕೋಟಿ ರೂ ಮಂಜೂರು ಮಾಡಿದೆ~ ಎಂದು ತಿಳಿಸಿದರು. ಕನ್ನಡೇತರರಿಗೆ ಕನ್ನಡ ಕಲಿಸುವ ಕೇಂದ್ರಗಳನ್ನು ರಾಜ್ಯದ ವಿವಿಧೆಡೆ   ಆರಂಭಿಸಲಾಗಿದೆ. ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಕಲಿಸಲು  ಅಲ್ಲಿಯೂ  ಕೇಂದ್ರ ಆರಂಭಿಸಲಾಗುವುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.