ಜೆಎಸ್‌ಎಸ್ ವಿವಿ 3ನೇ ಘಟಿಕೋತ್ಸವ: ಆರೋಗ್ಯ ಸೇವೆಗೆ ಹೆಚ್ಚಿನ ಅನುದಾನ

7

ಜೆಎಸ್‌ಎಸ್ ವಿವಿ 3ನೇ ಘಟಿಕೋತ್ಸವ: ಆರೋಗ್ಯ ಸೇವೆಗೆ ಹೆಚ್ಚಿನ ಅನುದಾನ

Published:
Updated:

ಮೈಸೂರು: `ಸಾರ್ವಜನಿಕ ಆರೋಗ್ಯ ಸೇವೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 12ನೇ ಪಂಚವಾರ್ಷಿಕ ಯೋಜನೆಯಲ್ಲಿ ಹೆಚ್ಚಿನ ಅನುದಾನ ಮೀಸಲಿಟ್ಟಿದೆ~ ಎಂದು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಜಗದೀಶ್ ಪ್ರಸಾದ್ ಹೇಳಿದರು.ಶಿವರಾತ್ರೀಶ್ವರ ನಗರದ ಜೆಎಸ್‌ಎಸ್ ವೈದ್ಯಕೀಯ ಮಹಾವಿದ್ಯಾಲಯದ ರಾಜೇಂದ್ರ ಸಭಾಂಗಣದಲ್ಲಿ ಭಾನುವಾರ ನಡೆದ ಜೆಎಸ್‌ಎಸ್ ವಿಶ್ವವಿದ್ಯಾನಿಲ ಯದ 3ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.

`ಈಗಿನ ಜಿಡಿಪಿಯ ಶೇ 0.9 ರಿಂದ ಶೇ 2.5 ರಷ್ಟು ಹೆಚ್ಚುವರಿ ಹಣವನ್ನು ಆರೋಗ್ಯ ಸೇವೆಗೆ ಮೀಸಲಾಗಿ ಇಡ ಲಾಗಿದೆ. ಜನರಿಗೆ ಉತ್ತಮ ಅರೋಗ್ಯ ಸೇವೆ ಒದಗಿಸುವಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳೂ ಶ್ರಮಿಸುತ್ತಿವೆ.ಖಾಸಗಿ ಆರೋಗ್ಯ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ವೈದ್ಯಕೀಯ ಕೋರ್ಸ್ ಮುಗಿಸಿ ಪದವಿ ಪಡೆ ಯುತ್ತಿರುವ ವಿದ್ಯಾರ್ಥಿಗಳು ವೃತ್ತಿ ಜೀವನಕ್ಕೆ ಕಾಲಿಟ್ಟ ಬಳಿಕ ನೈತಿಕತೆ, ಮೌಲ್ಯಗಳನ್ನು ಮರೆಯಬಾರದು~ ಎಂದು ಸಲಹೆ ನೀಡಿದರು.`ಭಾರತ ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ಪ್ರತಿ ವರ್ಷ ಲಕ್ಷಾಂತರ ವೈದ್ಯರು, ಶುಶ್ರೂಷಕಿ ಯರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿದೆ. ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯುವ ಮೂಲಕ ಬಡಜನರಿಗೆ ಆರೋಗ್ಯ ಸೇವೆ ನೀಡುತ್ತಿದೆ. ರೋಗಿಗಳ ಸಂಖ್ಯೆ ಹೆಚ್ಚಾದರೆ ದೇಶದ ಆರ್ಥಿಕ ಸ್ಥಿತಿ ಕುಸಿದು ಬೀಳುತ್ತದೆ. ಹಾಗಾಗಿ ಆರೋಗ್ಯ ಸೇವೆ ಒದಗಿಸುವ ಜತೆಗೆ ರೋಗಗಳ ನಿಯಂತ್ರಣವೂ ಅಗತ್ಯ ವಾಗಿದೆ~ ಎಂದು ಅಭಿಪ್ರಾಯಪಟ್ಟರು.ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಸಮಕುಲಾಧಿಪತಿ ಬಿ.ಎನ್.ಬೆಟ್‌ಕೆರೂರ್, ಕುಲಪತಿ ಡಾ.ಬಿ.ಸುರೇಶ್, ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಬಸವಣ್ಣ ಗೌಡಪ್ಪ, ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಜಿ.ಶಿವ ಕುಮಾರ್, ಕುಲಸಚಿವ ಡಾ.ಬಿ.ಮಂಜು ನಾಥ್, ಕುಲಸಚಿವ (ಪರೀಕ್ಷಾಂಗ) ಡಾ.ಆರ್.ವಿಜಯಸಿಂಹ, ಉಪ ಕುಲಸಚಿವ (ಮೌಲ್ಯಮಾಪನ) ಸುಧೀಂದ್ರ ಭಟ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry