ಗುರುವಾರ , ನವೆಂಬರ್ 21, 2019
20 °C

ಜೆಡಿಎಸ್‌ಗೆ ರಾಜುಗೌಡ

Published:
Updated:

ಬೆಂಗಳೂರು: ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಚಿವ ರಾಜುಗೌಡ ಶುಕ್ರವಾರ ಬೆಳಿಗ್ಗೆ 11ಕ್ಕೆ ಇಲ್ಲಿ ಜೆಡಿಎಸ್‌ಗೆ ಸೇರಲಿದ್ದಾರೆ.ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಗುರುವಾರ ರಾತ್ರಿ ಚರ್ಚೆ ನಡೆಸಿದ ರಾಜುಗೌಡ, ಜೆಡಿಎಸ್ ಸೇರುವ ತೀರ್ಮಾನ ತೆಗೆದುಕೊಂಡರು. ಸುರಪುರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಗೊತ್ತಾಗಿದೆ. ಅವರು ಈ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದರು. ಆದರೆ, ಕಾಂಗ್ರೆಸ್ ಟಿಕೆಟ್ ದೊರೆಯುವುದಿಲ್ಲ ಎಂದು ಖಚಿತವಾಗುತ್ತಿದ್ದಂತೆಯೇ ಜೆಡಿಎಸ್ ಸೇರುವ ತೀರ್ಮಾನ ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)