ಭಾನುವಾರ, ಏಪ್ರಿಲ್ 18, 2021
24 °C

ಜೆಡಿಎಸ್‌ನಿಂದ ಆಹ್ವಾನ: ಹಾಲಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂದಾಪುರ: `ಸಚಿವ ಸ್ಥಾನ ಸಿಗದ್ದಕ್ಕೆ ಬೇಸರವಿಲ್ಲ. ಆದರೆ ಭರವಸೆ ನೀಡಿ ಬೆಂಗಳೂರಿಗೆ ಕರೆಸಿ ಅವಮಾನ ಮಾಡಿದ್ದಕ್ಕಷ್ಟೇ ನೊಂದಿದ್ದೇನೆ~ ಎಂದು ಪುನರುಚ್ಚರಿಸಿರುವ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಾತ್ಯತೀತ ಜನತಾ ದಳದಿಂದ ಪಕ್ಷ ಸೇರುವಂತೆ ತಮಗೆ ಆಹ್ವಾನ ಬಂದಿದೆ ಎಂದು ಹೇಳಿದರು.ಕುಂದಾಪುರದ ತಮ್ಮ ನಿವಾಸದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ನನ್ನ ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ ಸ್ನೇಹಿತರೊಬ್ಬರ ಮೊಬೈಲ್‌ನಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪಕ್ಷಕ್ಕೆ ಬರುವಂತೆ ನನಗೆ ಆಹ್ವಾನ ನೀಡಿದ್ದಾರೆ. ಆದರೆ ಇನ್ನೂ  ತೀರ್ಮಾನ ಕೈಗೊಂಡಿಲ್ಲ. ಪಕ್ಷ ಬಿಡಬೇಕೇ, ಬೇಡವೇ ಎನ್ನುವ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ~ ಎಂದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.