ಭಾನುವಾರ, ಜೂನ್ 13, 2021
22 °C

ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತ ಸಾಲ ಮನ್ನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಳಸ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಉಪ ಚುನಾವಣೆ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ. ಈ ಚುನಾವಣೆ ರಾಜ್ಯದಲ್ಲಿ ರೈತ ಪರವಾದ ಸರ್ಕಾರ ರಚನೆಗೆ ಅಡಿಗಲ್ಲು ಆಗಲಿದೆ ಎಂದು ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಜೆಡಿಎಸ್ ಅಭ್ಯರ್ಥಿ ಬೋಜೇಗೌಡ ಪರ ಪಟ್ಟಣದ ಮುಖ್ಯರಸ್ತೆಯಲ್ಲಿ ಮತ ಯಾಚಿಸಿದ ಬಳಿಕ ದುರ್ಗಾ ಮಂಟಪದಲ್ಲಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಬಿಜೆಪಿ, ಕಾಂಗ್ರೆಸ್ ದೋಷಾರೋಪವನ್ನೇ ಪ್ರಚಾರ ತಂತ್ರ ಎಂದುಕೊಂಡಿವೆ. ಜೆಡಿಎಸ್ ವಿಷಯಾಧಾರಿತವಾಗಿ ಚುನಾವಣೆ ಎದುರಿಸುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಎಲ್ಲ ಸಾಲ ಮನ್ನಾ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.ಕಳಸ ಹೋಬಳಿಗೆ ಕಂಟಕವಾಗಿದ್ದ ಭದ್ರಾ ಮೇಲ್ದಂಡೆ ಯೋಜನೆ ಮಾರ್ಪಾಟು ಮಾಡಿದ್ದು ಜೆಡಿಎಸ್ ಆಡಳಿತ ಎಂದು ಹೇಳಿದ ಎಚ್.ಡಿ.ಕೆ., ರಾಜ್ಯದ ಅಭಿವೃದ್ಧಿಗೆ ಮಾರಕವಾದ ಆಲೋಚನೆ ಹೊಂದಿರುವ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ತಿರಸ್ಕರಿಸಿ ಎಂದರು.ರಾಜ್ಯದಲ್ಲಿ ಬಿಜೆಪಿ ಭ್ರಷ್ಟಾಚಾರ ಬಗ್ಗೆ ಕಾಂಗ್ರೆಸ್ ದನಿ ಎತ್ತುತ್ತಿಲ್ಲ. ಕೇಂದ್ರ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡ ನಂಬಿಕೆಗೆ ಅರ್ಹವಲ್ಲ ಎಂದು ಅವರು ಹೇಳಿದರು.ಹಿಂದೂ ಸಮಾಜ ರಕ್ಷಣೆ ಹೆಸರಿನಲ್ಲಿ ಬಿಜೆಪಿ ಭಾವನಾತ್ಮಕ ವಿಚಾರಗಳನ್ನೇ ಪ್ರಮುಖವಾಗಿಸಿಕೊಂಡು ಮತ ಕೇಳುತ್ತಿದೆ. ಕಾಂಗ್ರೆಸ್ ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯವನ್ನೇ ನಂಬಿಕೊಂಡಿದೆ. ಆದರೆ ಜೆಡಿಎಸ್ ಎಲ್ಲ ಜಾತಿ-ಧರ್ಮದವರೂ ಸಹೋದರತೆಯಿಂದ ಬಾಳಬೇಕು ಎಂಬ ಆಶಯದೊಂದಿಗೆ ಕೆಲಸ ಮಾಡುತ್ತಿದೆ ಎಂದರು.ಜೆಡಿಎಸ್ ಸ್ಥಳೀಯ ಮುಖಂಡರಾದ ಮಂಜಪ್ಪಯ್ಯ, ಉಮಾಪತಿ, ರಾಜಣ್ಣ, ಜ್ವಾಲನಯ್ಯ, ವಿಜಯಕುಮಾರ್, ಆಶಾಲತಾ, ಸಂತೋಷ್ ಮತ್ತಿತರರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.