ಸೋಮವಾರ, ಮೇ 23, 2022
30 °C

ಜೆಡಿಎಸ್: ಅಬ್ದುಲ್ ಅಜೀಂ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಮತ್ತೊಂದು ಅವಧಿಗೆ ಮುಂದುವರಿಯಲು ಪಕ್ಷದ ವರಿಷ್ಠರು ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ಅಬ್ದುಲ್ ಅಜೀಂ, ಜೆಡಿಎಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಪರಿಷತ್ ಚುನಾವಣೆಗೆ ಸೈಯದ್ ಮುದೀರ್ ಆಗಾ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಿದ ಕೂಡಲೇ ಪರಿಷತ್ ಸದಸ್ಯ ಅಜೀಂ ವರಿಷ್ಠರ ವಿರುದ್ಧ ಟೀಕಾಪ್ರಹಾರ ನಡೆಸಿದರು.  ಪಕ್ಷ ತೊರೆಯುವ ಇಂಗಿತ ವ್ಯಕ್ತಪಡಿಸಿದರು.ಇದೇ 17ಕ್ಕೆ ಅವರ ಸದಸ್ಯತ್ವದ ಅವಧಿ ಮುಗಿಯಲಿದೆ. ಇದರ ಬೆನ್ನಲ್ಲೇ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಹುದ್ದೆ ಕಳೆದುಕೊಳ್ಳುತ್ತಾರೆ. ಹೀಗಾಗಿ ಅವರ ರಾಜೀನಾಮೆಗೆ ಮಹತ್ವ ನೀಡಬೇಕಾಗಿಲ್ಲ ಎಂದು ಪಕ್ಷದ ಮುಖಂಡ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.