ಮಂಗಳವಾರ, ಮೇ 24, 2022
23 °C
ಮಂಡ್ಯ ಲೋಕಸಭಾ ಉಪ ಚುನಾವಣೆ

ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸಿ.ಎಸ್.ಪುಟ್ಟರಾಜು ಅವರು ಕಣಕ್ಕೆಇಳಿಯುವ ಸಾಧ್ಯತೆ ಇದೆ. ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಸೋಮವಾರ ಮಂಡ್ಯ ಜಿಲ್ಲೆಯ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.ಪುಟ್ಟರಾಜು ಅವರನ್ನು ಕಣಕ್ಕೆ ಇಳಿಸಲು ಜಿಲ್ಲೆಯ ಮುಖಂಡರು ಒಲವು ವ್ಯಕ್ತಪಡಿಸಿದ್ದಾರೆ. ಆದರೆ, ಶಾಸಕ ಎನ್. ಚೆಲುವರಾಯಸ್ವಾಮಿ ಅವರು ವಿಧಾನ ಪರಿಷತ್ ಸದಸ್ಯ ರಾಮಕೃಷ್ಣ ಪರವಾಗಿ ಇದ್ದಾರೆ ಎನ್ನಲಾಗಿದೆ.ಚೆಲುವರಾಯಸ್ವಾಮಿ ಅವರ ಮನವೊಲಿಸಿ ಪುಟ್ಟರಾಜು ಅವರನ್ನೇ ಕಣಕ್ಕೆ ಇಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.