ಶನಿವಾರ, ನವೆಂಬರ್ 23, 2019
18 °C

ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Published:
Updated:

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ  ನೂರಾರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.



ಬಿಜೆಪಿ ಅಭ್ಯರ್ಥಿ ಉದಯ್ ಬಿ. ಗರುಡಾಚಾರ್ ಹೊಸ ಕಾರ್ಯಕರ್ತರನ್ನು ಪಕ್ಷಕ್ಕೆ ಸ್ವಾಗತಿಸಿ, `ಸ್ವಚ್ಛ ಆಡಳಿತ ನೀಡಿ ಈ ಭಾಗದ ಜನರಿಗೆ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು. ಕಾರ್ಯಕರ್ತರು ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಪಕ್ಷವನ್ನು ಸೇರುತ್ತಿರುವುದು ಉತ್ತಮ ಬೆಳವಣಿಗೆ' ಎಂದು ಅವರು ಹೇಳಿದರು.

ಪ್ರತಿಕ್ರಿಯಿಸಿ (+)