ಭಾನುವಾರ, ನವೆಂಬರ್ 17, 2019
23 °C

ಜೆಡಿಎಸ್ ತೊರೆದ ಮುನಿಕೃಷ್ಣ

Published:
Updated:

ಬೆಂಗಳೂರು: ಜಾತ್ಯತೀತ ಜನತಾದಳದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ. ಮುನಿಕೃಷ್ಣ ಅವರು ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಯಿಂದ ಬೇಸತ್ತು, ತಮ್ಮ ಹುದ್ದೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಮುನಿಕೃಷ್ಣ, `ಒಂದೂವರೆ ವರ್ಷದ ಹಿಂದೆ ಬಿಜೆಪಿಯಿಂದ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೆ. ಅಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಜೆಡಿಎಸ್‌ನ ರಾಜ್ಯ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದರು. ಇದೀಗ ಜೆಡಿಎಸ್ ಟಿಕೆಟ್ ಅನ್ನು ಅಬ್ದುಲ್ ಹಜೀಂ ಅವರಿಗೆ ನೀಡಲಾಗಿದೆ. ಇದರಿಂದ ನೊಂದು ಜೆಡಿಎಸ್‌ಗೆ ರಾಜೀನಾಮೆ ನೀಡಿ, ಹೆಬ್ಬಾಳ ಕ್ಷೇತ್ರದಲ್ಲಿ ಕೆಜೆಪಿಯಿಂದ ಸ್ಪರ್ಧಿಸುತ್ತಿದ್ದೇನೆ' ಎಂದು ಹೇಳಿದರು.

ಪ್ರತಿಕ್ರಿಯಿಸಿ (+)