ಮಂಗಳವಾರ, ನವೆಂಬರ್ 19, 2019
27 °C

ಜೆಡಿಎಸ್ ಪ್ರಚಾರ ಕಾರ್ಯ ಆರಂಭ

Published:
Updated:

ರಾಜರಾಜೇಶ್ವರಿನಗರ: ರಾಜ್ಯದ ಸಮಗ್ರ ಅಭಿವೃದ್ಧಿಗೆ ದುಡಿಯಲು ಮತ್ತು ಬೆಂಗಳೂರು ನಗರದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರೂಪಿಸಲು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಬೇಕಿದ್ದು, ಅದಕ್ಕಾಗಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮನವಿ ಮಾಡಿದರು.ಕುಂಬಳಗೋಡಿನಲ್ಲಿ ನಡೆದ ಯಶವಂತಪುರ ಕ್ಷೇತ್ರದ ಜೆಡಿಎಸ್ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷಗಳನ್ನು ಅಧಿಕಾರಕ್ಕೆ ತರಬೇಕು. ಆ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕರಿಸಬೇಕು ಎಂದು ಹೇಳಿದರು.ಜೆಡಿಎಸ್ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ, ಪಾಲಿಕೆ ಸದಸ್ಯೆ ಗಾಯತ್ರಿ ಜವರಾಯಿಗೌಡ, ಎ.ಎಂ.ಹನುಮಂತೇಗೌಡ, ಸೂಲಿಕೆರೆ ಪಂಚಾಯಿತಿ ಅಧ್ಯಕ್ಷ ಶಿವು  ಇತರರು ಇದ್ದರು.

ಪ್ರತಿಕ್ರಿಯಿಸಿ (+)