ಜೆಡಿಎಸ್ ಬಲವರ್ಧನೆಗೆ ಒತ್ತು: ಪಂಚಾಕ್ಷರಿ

7

ಜೆಡಿಎಸ್ ಬಲವರ್ಧನೆಗೆ ಒತ್ತು: ಪಂಚಾಕ್ಷರಿ

Published:
Updated:

ಚಾಮರಾಜನಗರ: ‘ಪಕ್ಷದ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ. ಅವರ ಆಶಯದಂತೆ ಜಿಲ್ಲೆಯಲ್ಲಿ ಜೆಡಿಎಸ್ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಆಯ್ಕೆ ಬಗ್ಗೆ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಯಾವುದೇ ಅಸಮಾಧಾನವಿಲ್ಲ’ ಎಂದು ಜೆಡಿಎಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಎಂ. ಪಂಚಾಕ್ಷರಿ ಹೇಳಿದರು. ‘ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹಾಗೂ ಎಚ್.ಡಿ. ದೇವೇಗೌಡ ಅವರು ಜವಾಬ್ದಾರಿ ನೀಡಿದ್ದಾರೆ. ಎಲ್ಲರನ್ನು ಒಟ್ಟು ಗೂಡಿಸಿ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇನೆ. ಪಕ್ಷದ ಮುಖಂಡರು ಕೂಡ ಸಹಕಾರ ನೀಡಲಿದ್ದಾರೆ’ ಎಂದು ಮಂಗಳವಾರ ಅವರು ಸುದ್ದಿಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.ಫೆ. 9ರಂದು ಬೆಳಿಗ್ಗೆ 8.30ಗಂಟೆಗೆ ನಂಜನ ಗೂಡಿನಿಂದ ಪಕ್ಷ ಸಂಘಟನೆ ಸಂಬಂಧ ಕಾರ್ಯ ಕರ್ತರ ರ್ಯಾಲಿ ನಡೆಯಲಿದೆ. ಮಾಜಿ ಸಚಿವ ಎಂ. ಮಹದೇವು ನೇತೃತ್ವದಲ್ಲಿ ಈ ರ್ಯಾಲಿ ಆಯೋಜಿ ಸಲಾಗಿದೆ. ನಂತರ ಅವರು ನಗರಕ್ಕೆ ಭೇಟಿ ನೀಡಿ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ ಎಂದರು. ಬಳಿಕ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಲಾಗುವುದು. ಫೆ. 10ರಂದು ಕೊಳ್ಳೇಗಾಲ ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿದೆ.ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಸುಮಾರು ಒಂದು ಸಾವಿರ ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆಯಾ ಗಲಿದೆ. ಕುಮಾರಸ್ವಾಮಿ  ಸಮ್ಮುಖದಲ್ಲಿ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು. ಮಾರ್ಟಳ್ಳಿಯಲ್ಲೂ ಪಕ್ಷದ ಕಾರ್ಯಕರ್ತರ ಸಭೆ ನಡೆಯಲಿದೆ. ಹನೂರಿನಲ್ಲಿ ಜೆಡಿಎಸ್ ಕಚೇರಿಯ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ.ನಗರದಲ್ಲೂ ಜಿಲ್ಲಾ ಕಚೇರಿ ಸ್ಥಾಪನೆಗೆ ಹುಡುಕಾಟ ನಡೆದಿದೆ. ಸದ್ಯದಲ್ಲೇ ಪಕ್ಷದ ಕಚೇರಿ ಆರಂಭಿಸಲಾಗುವುದು ಎಂದರು.ಜೆಡಿಎಸ್ ಮುಖಂಡ ಪೊನ್ನಾಚಿ ಮಹದೇವ ಸ್ವಾಮಿ ಮಾತನಾಡಿ, ‘ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ನಡುವಿನ ಅಸಮಾಧಾನ ಗಳಿಂದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರುವುದು ಸತ್ಯ. ಇದನ್ನು ಸರಿಪಡಿಸಿಕೊಂಡು ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ದುಡಿಯಲಾಗುವುದು’ ಎಂದು ತಿಳಿಸಿದರು.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದ ಭೂ ಕಬಳಿಕೆ ಬಗ್ಗೆ ಕುಮಾರಸ್ವಾಮಿ ದಾಖಲೆ ಸಮೇತ ಹೋರಾಟ ಮಾಡುತ್ತಿದ್ದಾರೆ. ವಿರೋಧ ಪಕ್ಷವಾದ ಕಾಂಗ್ರೆಸ್ ಮಾಡುವ ಕೆಲಸವನ್ನು ಜೆಡಿಎಸ್ ಮಾಡುತ್ತಿದೆ. ಮುಖ್ಯ ಮಂತ್ರಿಯ ಸ್ವಜನಪಕ್ಷಪಾತದ ಧೋರಣೆ ವಿರುದ್ಧ ಪಕ್ಷದಿಂದ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಆಲೂರು ಮಲ್ಲು, ಕೋಡಿಮೋಳೆ ಗೋವಿಂದಶೆಟ್ಟಿ, ಜೆ. ಶಿವಮೂರ್ತಿ ಇತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry