ಸೋಮವಾರ, ನವೆಂಬರ್ 18, 2019
27 °C

ಜೆಡಿಎಸ್ ಶಾಸಕಿ ಕಲ್ಪನಾ ರಾಜೀನಾಮೆ

Published:
Updated:

ಬೆಂಗಳೂರು: ಮದ್ದೂರು ಕ್ಷೇತ್ರದ ಜೆಡಿಎಸ್ ಶಾಸಕಿ ಕಲ್ಪನಾ ಸಿದ್ದರಾಜು ಅವರು ವಿಧಾನಸಭಾ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ನೀಡಿದರು. ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಕಚೇರಿಯಲ್ಲಿ ಇಲ್ಲದ ಕಾರಣ ರಾಜೀನಾಮೆ ಪತ್ರವನ್ನು ವಿಧಾನಸಭೆ ಕಾರ್ಯದರ್ಶಿ ಓಂಪ್ರಕಾಶ ಅವರಿಗೆ ನೀಡಲಾಗಿದೆ. `ರಾಜೀನಾಮೆ ಪತ್ರ ಕ್ರಮಬದ್ಧವಾಗಿದ್ದು, ಅದನ್ನು ಸ್ಪೀಕರ್ ಅವರ ಗಮನಕ್ಕೆ ತರಲಾಗುವುದು' ಎಂದು ಓಂಪ್ರಕಾಶ ಅವರು `ಪ್ರಜಾವಾಣಿ'ಗೆ ತಿಳಿಸಿದರು.ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಟಿಕೆಟ್ ನಿರಾಕರಿಸಿರುವ ಕಾರಣ ಅವರು ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ. ಈ ಕಾರಣಕ್ಕೆ ಜೆಡಿಎಸ್‌ಗೂ ರಾಜೀನಾಮೆ ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷ ಅವರಿಗೆ ಮದ್ದೂರಿನಿಂದ ಟಿಕೆಟ್ ನೀಡುವ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)