ಸೋಮವಾರ, ನವೆಂಬರ್ 18, 2019
20 °C

ಜೆಡಿಯು ಅಧ್ಯಕ್ಷರಾಗಿ ನಾಡಗೌಡ ಪುನರಾಯ್ಕೆ

Published:
Updated:

ಬೆಂಗಳೂರು: ಸಂಯುಕ್ತ ಜನತಾದಳದ (ಜೆಡಿಯು) ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಡಾ.ಎಂ.ಪಿ. ನಾಡಗೌಡ ಅವರು ಮರು ಆಯ್ಕೆಯಾಗಿದ್ದಾರೆ.ಬೆಂಗಳೂರಿನಲ್ಲಿ ಬುಧವಾರ ನಡೆದ ರಾಜ ಪರಿಷತ್ ಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನಾಡಗೌಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, `ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ' ಎಂದು ಸಂತಸ ವ್ಯಕ್ತಪಡಿಸಿದರು.`ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಭ್ರಷ್ಟಾಚಾರ, ರಾಜಕೀಯ ಅನೈತಿಕತೆ, ಸ್ವಜನ ಪಕ್ಷಪಾತ, ಅಧಿಕಾರ ದುರುಪಯೋಗ ಮುಂತಾದವುಗಳಿಂದ ಜನ ಬೇಸತ್ತಿದ್ದಾರೆ. ಜಾತ್ಯತೀತ ತತ್ವ, ಅಧಿಕಾರ ವಿಕೇಂದ್ರೀಕರಣ, ಆಂತರಿಕ ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯ ಪಕ್ಷದ ತತ್ವಗಳು. ಜನರು ಪಕ್ಷವನ್ನು ಬೆಂಬಲಿಸಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.ಚುನಾವಣೆ ಪ್ರಚಾರದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್, ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್ ಮತ್ತಿತರರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)