ಪಟ್ನಾ (ಪಿಟಿಐ): ಚುನಾವಣಾ ಪ್ರಚಾರ ಸಮಿತಿಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನೇಮಕ ಕೇವಲ ಬಿಜೆಪಿಯಲ್ಲಷ್ಟೇ ಅಲ್ಲ ಎನ್ಡಿಎ ಮೈತ್ರಿಕೂಟದಲ್ಲಿಯೂ ತಳಮಳ ಸೃಷ್ಟಿಸಿದ್ದು, ಪ್ರಧಾನಿ ಅಭ್ಯರ್ಥಿ ವಿಷಯಕ್ಕೆ ಸಂಬಂಧಿಸಿದಂತೆ ಮೊದಲೇ ದೂರವಾಗಿರುವ ಬಿಜೆಪಿ ಮತ್ತು ಸಂಯುಕ್ತ ಜನತಾದಳ (ಜೆಡಿಯು) ನಡುವಿನ ಕಂದರ ಮತ್ತಷ್ಟು ವಿಸ್ತಾರಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.

ಪ್ರಧಾನಿ ಹುದ್ದೆಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಬಿಂಬಿಸುವ ಯತ್ನಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಎನ್ಡಿಎ ಮೈತ್ರಿಕೂಟದ ಪ್ರಮುಖ ಅಂಗಪಕ್ಷ ಜೆಡಿಯು, ಮೋದಿ ಅವರಿಗೆ ಪ್ರಚಾರ ಸಮಿತಿ ಸಾರಥ್ಯ ವಹಿಸಿರುವ ಬಿಜೆಪಿಯ ನಿರ್ಧಾರ ಕುರಿತು ಶೀಘ್ರ ತನ್ನ ನಿಲುವು ಪ್ರಕಟಿಸುವುದಾಗಿ ಹೇಳಿದೆ.

`ಬಿಜೆಪಿ ಪ್ರಚಾರ ಸಮಿತಿಗೆ ಮೋದಿ ನೇಮಕದ ಸಾಧಕ-ಬಾಧಕ ಕುರಿತು ಪಕ್ಷದ ವೇದಿಕೆಯಲ್ಲಿ ಸಮಗ್ರವಾಗಿ ಸಮಾಲೋಚನೆ ನಡೆಸಿದ ನಂತರ ಈ ಕುರಿತು ಅಂತಿಮ ನಿಲುವು ಪ್ರಕಟಿಸಲಾಗುವುದು' ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಮೋದಿ ಬಗ್ಗೆ ಮತ್ತೆ ತಮ್ಮ ಅಸಹನೆ ಹೊರ ಹಾಕಿದ ನಿತೀಶ್, ಬಿಜೆಪಿ ಆಂತರಿಕ ಬೆಳವಣಿಗೆ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಜೆಡಿಯು ಅಂತಿಮ ನಿಲುವು ಪ್ರಕಟಿಸುವವರೆಗೂ ಎಲ್ಲ ಪ್ರಶ್ನೆಗಳೊಂದಿಗೆ ತಾಳ್ಮೆಯಿಂದ ಕಾಯಿರಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು.

ಮೋದಿ ಅವರಿಗೆ ಪ್ರಚಾರ ಸಮಿತಿ ಸಾರಥ್ಯ ವಹಿಸುವ ನಿರ್ಧಾರ ತೆಗೆದುಕೊಳ್ಳುವ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ತಮ್ಮ ಜೊತೆ ಚರ್ಚಿಸಿದ್ದಾರೆ ಎಂಬ ವರದಿಗಳನ್ನು ಅವರು ನಿರಾಕರಿಸಿದರು. ತಮ್ಮ ಮಧ್ಯೆ ಅಂತಹ ಯಾವುದೇ ಮಾತುಕತೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

`ಬಿಜೆಪಿಯಷ್ಟೇ ಜೆಡಿಯುಗೂ ಮೋದಿ ಅವರ ಅಗತ್ಯ ಇದೆ' ಎಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀವ್ ಪ್ರತಾಪ್ ರೂಡಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ನಿತೀಶ್, `ಎಲ್ಲರ ಹೇಳಿಕೆಗಳಿಗೂ ಪ್ರತಿಕ್ರಿಯಿಸಲು ಆಗದು' ಎಂದರು.

ಎನ್ಡಿಎ ಮೈತ್ರಿಕೂಟದ ಎಲ್ಲ ಅಂಗಪಕ್ಷಗಳಿಗೂ ಒಪ್ಪಿಗೆಯಾಗುವ ವ್ಯಕ್ತಿಯನ್ನು ಬಿಜೆಪಿಯು ಪ್ರಧಾನಿ ಹುದ್ದೆಗೆ ಡಿಸೆಂಬರ್ ಒಳಗಾಗಿ ಘೋಷಿಸಬೇಕು ಎಂಬ ಜೆಡಿಯು ಷರತ್ತುಬದ್ಧ ಗಡುವು ವಿಧಿಸಿತ್ತು. ಮೋದಿ ನೇಮಕ ಪಕ್ಷದ ಆಂತರಿಕ ವಿಚಾರ ಎಂದು ಪ್ರತಿಕ್ರಿಯೆ ನೀಡಿತ್ತು. ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರ ನಡೆಸುತ್ತಿದ್ದರೂ ನಿತೀಶ್ ಕುಮಾರ್ ಮತ್ತು ನರೇಂದ್ರ ಮೋದಿ ನಡುವಿನ ಬದ್ಧ ರಾಜಕೀಯ ವೈರತ್ವ ಗುಟ್ಟಿನ ವಿಷಯವೇನಲ್ಲ.

ದುರದೃಷ್ಟಕರ: ಗುಜರಾತ್ನಲ್ಲಿ 2002ರಲ್ಲಿ ನಡೆದ ಗೋಧ್ರಾ ಹತ್ಯಾಕಾಂಡಕ್ಕೆ ಪ್ರಮುಖ ಕಾರಣಕರ್ತರಾದ ಮೋದಿ ಅವರನ್ನು ಪ್ರಚಾರ ಸಮಿತಿ ಮುಖಸ್ಥರನ್ನಾಗಿ ನೇಮಕ ಮಾಡಿರುವುದು ದುರದೃಷ್ಟಕರ ಎಂದು ಸಮಾಜವಾದಿ ಪಕ್ಷ ಪ್ರತಿಕ್ರಿಯಿಸಿದೆ.

ಮೋದಿ ಅವರಂತಹ ನರಹಂತಕನಿಗೆ ಪ್ರಚಾರ ಸಮಿತಿ ಸಾರಥ್ಯ ವಹಿಸಿರುವುದು ನಾಚಿಕೆಗೇಡು ಎಂದು ಉತ್ತರ ಪ್ರದೇಶದ ಸಚಿವ ಅಜಂ ಖಾನ್ ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.