ಗುರುವಾರ , ಮೇ 19, 2022
20 °C

ಜೆನರ್ಮ್: ರಾಜ್ಯದ ಕ್ರಮಕ್ಕೆ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸರ್ಕಾರವು `ಜೆನರ್ಮ್~ ಯೋಜನೆಗಾಗಿ ಸೂಚಿಸಿದ 23 ಸುಧಾರಣಾ ಕ್ರಮಗಳ ಪೈಕಿ ಕರ್ನಾಟಕ ಸರ್ಕಾರವು 19 ಸುಧಾರಣಾ ಕ್ರಮಗಳನ್ನು ಯಶಸ್ವಿಯಾಗಿ ಕೈಗೊಂಡಿದೆ ಎಂದು ಮುಂಬೈನ ಕ್ರಿಸಿಲ್ ರಿಸ್ಕ್ ಅಂಡ್ ಇನ್‌ಫ್ರಾಸ್ಟ್ರಕ್ಚರ್ ಸಲ್ಯೂಷನ್ಸ್ ಲಿಮಿಟೆಡ್‌ನ ಸಲಹೆಗಾರ ರವಿಕಾಂತ್ ಜೋಷಿ ಹೇಳಿದರು.ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಜೆನರ್ಮ್ ಸಲಹೆಗಳನ್ನು ಜಾರಿ ಮಾಡುವ ವಿಚಾರದಲ್ಲಿ ಕಳೆದ ಏಳು ವರ್ಷಗಳ ಅವಧಿಯಲ್ಲಿ ಕರ್ನಾಟಕ ಸರ್ಕಾರ ಉತ್ತಮವಾಗಿ ನಡೆದುಕೊಂಡಿದೆ. ಎರಡನೇ ಹಂತದ ಸುಧಾರಣಾ ಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. `ಹೂಡಿಕೆದಾರರಿಗೆ ನಾನು ಶಿಫಾರಸು ಮಾಡುವ ದೇಶದ ಮೂರು ರಾಜ್ಯಗಳಲ್ಲಿ ಕರ್ನಾಟಕ ಒಂದಾಗಿದೆ~ ಎಂದು ಅವರು ಶ್ಲಾಘಿಸಿದರು. ನಗರಾಭಿವೃದ್ಧಿಗಾಗಿ ಗುಜರಾತ್ ಮಾದರಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ಒದಗಿಸಲು ಸೂಕ್ತ ನೀತಿ ರೂಪಿಸಬೇಕು. ನಗರ ಭೂ ನೀತಿಯನ್ನು ಜಾರಿಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.