ಸೋಮವಾರ, ಏಪ್ರಿಲ್ 19, 2021
32 °C

ಜೆಪಿಸಿ ಸದಸ್ಯರಿಗೆ ಚಾಕೊ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಂಚಿಕೆ ಹಗರಣದ ತನಿಖೆಗೆ ರಚಿಸಲಾಗಿರುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಯಲ್ಲಿ ಬಿಜೆಪಿ ಮುಖಂಡರಾದ ಯಶ್ವಂತ್ ಸಿನ್ಹಾ ಮತ್ತು ಜಸ್ವಂತ್ ಸಿಂಗ್ ಅವರಿಗೆ ಅವಕಾಶ ನೀಡಿರುವ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿರುವ ನಡುವೆಯೇ ಜೆಪಿಸಿ ಅಧ್ಯಕ್ಷ ಪಿ.ಸಿ.ಚಾಕೊ ಸಮಿತಿಯಲ್ಲಿ ಚರ್ಚಿಸಬೇಕಾದ ಯಾವುದೇ ವಿಷಯದಲ್ಲಿ ತಾವು ಭಾಗಿಯಾಗಿದ್ದರೆ ತಮ್ಮ ಮುಂದೆ ಹಾಜರಾಗುವಂತೆ ಸಮಿತಿಯ ಎಲ್ಲಾ ಸದಸ್ಯರಿಗೆ ಪತ್ರ ಬರೆದಿದ್ದಾರೆ.

ಸಮಿತಿಯಲ್ಲಿ ಚರ್ಚೆಗೆ ಬರುವ ಯಾವುದಾದರೂ ವಿಷಯದಲ್ಲಿ ಯಾವುದೇ ಸದಸ್ಯರ ಹಿತಾಸಕ್ತಿ ಅಡಗಿದ್ದಲ್ಲಿ ಅವರು ಸಮಿತಿಯ ಚರ್ಚೆಗಳಿಂದ ದೂರವೇ ಇರಬೇಕು ಎಂದು ಸಹ ಪತ್ರದಲ್ಲಿ ಸೂಚಿಸಲಾಗಿದೆ. ಯಶ್ವಂತ್ ಸಿನ್ಹಾ ಮತ್ತು ಜಸ್ವಂತ್ ಸಿಂಗ್ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಿರುವ ಬಗ್ಗೆ ಕಾಂಗ್ರೆಸ್‌ನ ಆಕ್ಷೇಪದ ಹಿನ್ನೆಲೆಯಲ್ಲಿ ಈ ಪತ್ರ ಬರೆಯಲಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.