ಶುಕ್ರವಾರ, ಏಪ್ರಿಲ್ 23, 2021
31 °C

ಜೇಠ್ಮಲಾನಿಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಪಕ್ಷದ ವರಿಷ್ಠರಿಗೆ ತಿರುಗಿ ಬಿದ್ದಿದ್ದ ರಾಜ್ಯಸಭಾ ಸದಸ್ಯ ರಾಮ್ ಜೇಠ್ಮಲಾನಿ ಅವರನ್ನು ಭಾನುವಾರ ಪಕ್ಷದಿಂದ ಅಮಾನತುಗೊಳಿಸಿದ್ದ ಬಿಜೆಪಿ, ಸೋಮವಾರ ಅವರಿಗೆ ಷೋಕಾಸ್ ನೋಟಿಸ್ ನೀಡಿದೆ.ಪಕ್ಷ ವಿರೋಧಿ ಚಟುವಟಿಕೆ ಹಾಗೂ ಅಶಿಸ್ತಿಗಾಗಿ ನಿಮ್ಮನ್ನು ಪಕ್ಷದಿಂದ ಏಕೆ ಉಚ್ಚಾಟಿಸಬಾರದು ಎಂದು ಷೋಕಾಸ್ ನೋಟಿಸ್‌ನಲ್ಲಿ ಕೇಳಲಾಗಿದೆ.ರಾಮ್ ಜೇಠ್ಮಲಾನಿ ಅವರನ್ನು ಅಮಾನತುಗೊಳಿಸುವ ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿ ಅವರ ತೀರ್ಮಾನವನ್ನು ಸಂಸದೀಯ ಮಂಡಳಿ ದೃಢಪಡಿಸಿದೆ. ಪಕ್ಷದಿಂದ ನಿಮ್ಮನ್ನು ಆರು ವರ್ಷಗಳ ಕಾಲ ಏಕೆ ಉಚ್ಚಾಟಿಸಬಾರದು ಎಂದು ಅವರಿಗೆ ಷೋಕಾಸ್ ನೋಟಿಸ್ ಸಹ ನೀಡಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ವರದಿಗಾರರಿಗೆ ತಿಳಿಸಿದರು.ಆದರೆ, ಗಡ್ಕರಿ ಹಾಗೂ ಪಕ್ಷದ ನಾಯಕರ ವಿರುದ್ಧ ಟೀಕೆ ಮಾಡಿರುವ ಸಂಸದರಾದ ಯಶವಂತ್ ಸಿನ್ಹಾ ಹಾಗೂ ಶತ್ರುಘ್ನ ಸಿನ್ಹಾ ಅವರ ವಿಚಾರ ಈ ಸಭೆಯಲ್ಲಿ  ಪ್ರಸ್ತಾಪವಾಗಲಿಲ್ಲ ಎಂದು ಅನಂತಕುಮಾರ್ ಹೇಳಿದರು.ಬಿಜೆಪಿಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅತ್ಯುನ್ನತ ಅಧಿಕಾರ ಸಂಸದೀಯ ಮಂಡಳಿಗೆ ಇದೆ. ಪಕ್ಷದ ಸಂಸದರು ಹಾಗೂ ಶಾಸಕರನ್ನು ಉಚ್ಚಾಟಿಸುವ ಅಧಿಕಾರವೂ ಈ ಮಂಡಳಿಯ ಕೈಯಲ್ಲಿದೆ.2009ರಲ್ಲಿ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಪಾಕಿಸ್ತಾನದ ಸಂಸ್ಥಾಪಕ ಜಿನ್ನಾ ಅವರನ್ನು ಹೊಗಳಿ ಪುಸ್ತಕ ಬರೆದಾಗ, ಷೋಕಾಸ್ ನೋಟಿಸ್ ಸಹ ನೀಡದೇ ಅವರನ್ನು ಉಚ್ಚಾಟಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.