ಜೈನ್ ಆಸ್ಪತ್ರೆ: ಭುಜದ ಮೂಳೆಗೆ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ವಿಭಾಗ

ಗುರುವಾರ , ಮೇ 23, 2019
26 °C

ಜೈನ್ ಆಸ್ಪತ್ರೆ: ಭುಜದ ಮೂಳೆಗೆ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ವಿಭಾಗ

Published:
Updated:

ಬೆಂಗಳೂರು: ನಗರದ ವಸಂತನಗರದಲ್ಲಿರುವ ಭಗವಾನ್ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಭುಜದ ಮೂಳೆಗೆ ಸಂಬಂಧಿಸಿದ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ವಿಭಾಗವನ್ನು ಮಂಗವಾರ ಪ್ರಾರಂಭವಾಯಿತು. ಎಲ್ಲ ವಯೋಮಾನದವರಲ್ಲೂ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಭುಜದ ಮೂಳೆ ತೊಂದರೆಗೆ ಆಧುನಿಕ ತಂತ್ರಜ್ಞಾನದ ಮೂಲಕ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.ಆಟ ಆಡುವಾಗ ಉಂಟಾದ ಗಾಯ, ಸಂಧಿವಾತಕ್ಕಾಗಿ ಭುಜದ ಕೀಲು ಜೋಡಣೆ, ಮಧುಮೇಹಿಗಳಲ್ಲಿರುವ ಭುಜದ ತೊಂದರೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಈ ವಿಭಾಗದಲ್ಲಿ ಗುಣಮಟ್ಟದ ಚಿಕಿತ್ಸೆ ದೊರೆಯಲಿದೆ. ಆಂಥ್ರೋಸ್ಕೊಪಿಕ್ ತಂತ್ರಜ್ಞಾನ ಬಳಸಿ ಜೀವಕೋಶಗಳಿಗೆ ಹಾನಿಯಾಗದಂತೆ ಭುಜದ ಕೀಲು ಜೋಡಣೆ ಶಸ್ತ್ರಚಿಕಿತ್ಸೆಯನ್ನು ನಡೆಸುವ ಸೌಕರ್ಯ ಕೂಡ ವಿಭಾಗದಲ್ಲಿದೆ.ಹೆಚ್ಚಿನ ಮಾಹಿತಿಗೆ ಡಾ. ಹೇಮಂತ ಕುಮಾರ್ ರೆಡ್ಡಿ ಅವರನ್ನು ಈ ವಿಳಾಸದಲ್ಲಿ ಸಂಪರ್ಕಿಸಬಹುದು. ವಿಳಾಸ: ವಿಭಾಗದ ಮುಖ್ಯಸ್ಥರು, ಭುಜದ ಆರ್ಥೋಸ್ಕೊಪಿಕ್ ಶಸ್ತ್ರಚಿಕಿತ್ಸಾ ವಿಭಾಗ, ಭಗವಾನ್ ಮಹಾವೀರ ಜೈನ್ ಆಸ್ಪತ್ರೆ, ಮಿಲ್ಲರ್ಸ್‌ ರಸ್ತೆ, ವಸಂತನಗರ. ಮೊಬೈಲ್: 96868 00666.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry