ಸೋಮವಾರ, ಮೇ 17, 2021
26 °C

ಜೈಲಿನಲ್ಲಿ ಕೈದಿಗಳ ಹೊಡೆದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಚಾರಣಾಧೀನ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸೋಮವಾರ ನಡೆದಿದೆ.ರವಿಕುಮಾರ್ ಮತ್ತು ಗಿರೀಶ್ ಉರುಫ್ ಕುಣಿಗಲ್ ಗಿರಿ ಹೊಡೆದಾಡಿಕೊಂಡವರು. ಸ್ನೇಹಿತರೇ ಆದ ಅವರು ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ನಾಲ್ಕು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.

ಬಂಧನಕ್ಕೊಳಗಾದ ನಂತರ ಗಿರೀಶ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿತ್ತು.ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ ಕಾರಣ ಗಿರೀಶ್ ಅವರನ್ನು ನಗರಕ್ಕೆ ಕರೆದುಕೊಂಡು ಬರಲಾಗಿತ್ತು. ಕೆಲ ವಿಷಯಗಳಲ್ಲಿ ಅವರಿಬ್ಬರ ಮಧ್ಯೆ ಭಿನ್ನಾಭಿಪ್ರಾಯ ಇದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನ ಜಗಳವಾಡಿದ್ದಾರೆ.ಗಿರೀಶ್, ರವಿಕುಮಾರ್ ಅವರ ಕೈ ಹಿಡಿದು ಎಳೆದು ಗೋಡೆಗೆ ಗುದ್ದಿಸಿದ್ದರಿಂದ ಅವರಿಗೆ ತೀವ್ರ ಗಾಯಗಳಾಗಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಿರೀಶ್ ಅವರಿಗೂ ಗಾಯಗಳಾಗಿದ್ದು ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಲಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಪರಪ್ಪನಅಗ್ರಹಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.