ಕೊಪ್ಪಳ: `ಒಂದು ವೇಳೆ ನನ್ನನ್ನು ಜೈಲಿಗೆ ಕಳುಹಿಸಿದರೆ ಜೈಲಿನಿಂದಲೇ ರಾಜಕಾರಣ ಮಾಡುತ್ತೇನೆ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ತಾಲ್ಲೂಕಿನ ಭಾಗ್ಯನಗರ ಗ್ರಾಮದಲ್ಲಿ ಬುಧವಾರ ಪಕ್ಷದ ಅಭ್ಯರ್ಥಿ ಪರ ಮತ ಯಾಚನೆಗಾಗಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

`ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ನ್ಯಾಯಾಲಯಕ್ಕೆ ತಲೆ ಬಾಗಬೇಕು. ನಾನು ಕಾನೂನು ಹೋರಾಟ ನಡೆಸುತ್ತೇನೆ. ನ್ಯಾಯಾಲಯ ನೀಡುವ ತೀರ್ಪಿಗೆ ತಲೆಬಾಗುತ್ತೇನೆ. ಒಂದು ವೇಳೆ ಜೈಲಿಗೆ ಕಳಿಸಿದರೂ ಅಲ್ಲಿಂದಲೇ ರಾಜಕಾರಣ ಮಾಡುತ್ತೇನೆ~ ಎಂದು ಹೇಳಿದರು.

ಕಬ್ಬಿಣದ ಅದಿರು ಚಿನ್ನದಷ್ಟೇ ಅಮೂಲ್ಯ. ಅದು ಮುಂದಿನ ಪೀಳಿಗೆಗೆ ಇರಬೇಕು ಎಂಬ ದೃಷ್ಟಿಯಿಂದ ನನ್ನ ಮೂರು ವರ್ಷಗಳ ಅಧಿಕಾರಾವಧಿಯಲ್ಲಿ ಗಣಿಕಾರಿಕೆಗೆ ಪರವಾನಗಿ ನೀಡಿಲ್ಲ. ಅಕ್ರಮ ಗಣಿಗಾರಿಕೆ, ಭ್ರಷ್ಟಾಚಾರ ನಡೆಸಿ ಯಾರು ಜೈಲಿಗೆ ಹೋಗಬೇಕಾಗಿತ್ತೋ ಅವರ ವಿರುದ್ಧ ಒಂದೂ ಪ್ರಕರಣ ದಾಖಲಾಗಿಲ್ಲ. ರಾಜ್ಯಪಾಲರು ಮಾಡಬಾರದ್ದನ್ನೆಲ್ಲ ಮಾಡಿದರು. ಎಲ್ಲವನ್ನೂ ಮುಚ್ಚಿ ಹಾಕಿದರು. ಏನೂ ತಪ್ಪು ಮಾಡದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ದೂರಿದರು.

`ವಿರೋಧ ಪಕ್ಷದವರಲ್ಲದೆ ನನ್ನ ಪಕ್ಷದವರೂ ನನ್ನನ್ನು ಅಧಿಕಾರದಿಂದ ಇಳಿಸಲು ಸಂಚು ಮಾಡಿದರು. ನಾನು ತಾತ್ಕಾಲಿಕವಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದೇನೆ. ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಿಗೆ ಅಂಜುವುದಿಲ್ಲ. ಈ ಉಪಚುನಾವಣೆ ಮುಗಿದ ನಂತರ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಪಕ್ಷ ಕಟ್ಟುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರುತ್ತೇನೆ~ ಎಂದು ತಿಳಿಸಿದರು.

`ನಿರೀಕ್ಷಣಾ ಜಾಮೀನು ಬೇಡ~
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಅಳಿಯ ಹಾಗೂ ಪುತ್ರರ ಮನೆ-ಕಚೇರಿಗಳ ಮೇಲೆ ದಾಳಿ ನಡೆಯುವುದರ ಬಗ್ಗೆ ಮುಂಚೆಯೇ ತಿಳಿದಿತ್ತು ಎಂಬುದಾಗಿ ಹೇಳಿದ್ದಾರೆ. ಇಂತಹ ಹೇಳಿಕೆಯನ್ನು ಗಮನಿಸಿದರೆ ಬರುವ ದಿನಗಳಲ್ಲಿ ಲೋಕಾಯುಕ್ತರು ಕೈಗೊಳ್ಳುವ ತನಿಖೆ ಮೇಲೆ ಬಿ.ಎಸ್.ಯಡಿಯೂರಪ್ಪ ಪ್ರಭಾವ ಬೀರುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಹೀಗಾಗಿ ಅವರಿಗೆ ನಿರೀಕ್ಷಣಾ ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ಮನವಿ ಮಾಡುವುದಾಗಿ ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ತಿಳಿಸಿದರು.

ಅವರು ನಗರದಲ್ಲಿ ಬುಧವಾರ ಪಕ್ಷದ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸಂಬಂಧ ನಾಳೆ ವಕೀಲರೊಂದಿಗೆ ಚರ್ಚಿಸಿ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಸ್ಪಷ್ಟಪಡಿಸಿದರು.

ದಾಳಿಯ ಮಾಹಿತಿ ಮುಂಚಿತವಾಗಿ ಸಿಕ್ಕಿದೆ ಎಂದಿರುವುದು ಅವರು ಲೋಕಾಯುಕ್ತ ಕಚೇರಿಯಲ್ಲಿ ಪ್ರಭಾವ ಹೊಂದಿರುವುದನ್ನು ಸೂಚಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಇದುವರೆಗೆ ನಡೆದಿರುವ ಆಪರೇಷನ್ ಕಮಲ ಕುರಿತು ರಾಜ್ಯ ಚುನಾವಣಾ ಆಯೋಗವು ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಒತ್ತಾಯಿಸಿದರು. ಈ ಸಂಬಂಧ ವೈಯಕ್ತಿಕವಾಗಿ ಅಥವಾ ಪಕ್ಷದ ಪರವಾಗಿ ದೂರು ಸಲ್ಲಿಸುವುದಿಲ್ಲ ಎಂದು ಪ್ರಶ್ನೆಗೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.