ಜೈಲು- ಬೇಲು- ಸೇಲು ಬಿಜೆಪಿ ಆಸ್ತಿ

ಶನಿವಾರ, ಮೇ 25, 2019
27 °C

ಜೈಲು- ಬೇಲು- ಸೇಲು ಬಿಜೆಪಿ ಆಸ್ತಿ

Published:
Updated:

ಕೊಪ್ಪಳ: ಜೈಲು, ಬೇಲು (ಜಾಮೀನು) ಹಾಗೂ ಸೇಲು (ಮಾರಾಟ) ಬಿಜೆಪಿ ಆಸ್ತಿ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದರು.ಅವರು ನಗರದ ಮಿಟ್ಟಿಕೇರಿಯಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚನೆಗಾಗಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದರು.ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜನಾರ್ದನ ರೆಡ್ಡಿ ಜೈಲು ಸೇರಿದ್ದಾನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌ಯಡಿಯೂರಪ್ಪ ಬೇಲ್‌ಗಾಗಿ ಪರದಾಡುತ್ತಿದ್ದಾರೆ ಹಾಗೂ ಉಳಿದ ಬಿಜೆಪಿ ಮುಖಂಡರು ಮತದಾರರನ್ನು ಮಾರಾಟ (ಸೇಲ್) ಮಾಡಲು ಹೊರಟಿದ್ದಾರೆ ಎಂದು ವಿಶ್ಲೇಷಿಸಿದರು.60 ವರ್ಷಗಳಲ್ಲಿ ಕಾಂಗ್ರೆಸ್‌ಗೆ ಮಾಡಲಾಗದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾಗಿ ಬಿಜೆಪಿ ಹೇಳುತ್ತಿದೆ. ಆದರೆ, ಕೃಷ್ಣಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು, ಹಿರೇಹಳ್ಳ ಯೋಜನೆ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳು ಕಾಂಗ್ರೆಸ್‌ನ ಕೊಡುಗೆ ಎಂದು ಹೇಳಿದರು.

 

ಸಿ.ಎಂ.ಇಬ್ರಾಹಿಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಹನುಮಂತರಾವ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಅಲ್ಲಂ ವೀರಭದ್ರಪ್ಪ, ಡಿ.ಕೆ.ಶಿವಕುಮಾರ್, ಅಭ್ಯರ್ಥಿ ಕೆ.ಬಸವರಾಜ ಹಿಟ್ನಾಳ್ ಮತ್ತಿತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry