ಗುರುವಾರ , ಜೂನ್ 24, 2021
23 °C

ಜೈವಿಕ ಮಾಹಿತಿಯುಳ್ಳ ಹಾಜರಾತಿ ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಉದ್ಯೋಗಿಗಳ ಕೆಲಸದ ವೇಳೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಉದ್ದೇಶದಿಂದ ಆದಾಯ ತೆರಿಗೆ ಇಲಾಖೆಯು ತನ್ನ ಎರಡು ಲಕ್ಷಕ್ಕೂ ಹೆಚ್ಚಿನ ಸಿಬ್ಬಂದಿಯನ್ನು ಜೈವಿಕ ಮಾಹಿತಿ ಆಧಾರಿತ ಹಾಜರಾತಿ ಮೇಲ್ವಿಚಾರಣಾ ವ್ಯವಸ್ಥೆಗೆ ಒಳಪಡಿಸಲು ನಿರ್ಧರಿಸಿದೆ.     ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಆರಂಭಿಸಿರುವ ಈ ಯೋಜನೆಗಾಗಿ ಇಲಾಖೆಯು ಟೆಂಡರ್ ಆಹ್ವಾನಿಸಿದೆ.ದೆಹಲಿಯಲ್ಲಿರುವ ಎರಡು ಬೃಹತ್ ಆದಾಯ ತೆರಿಗೆ ಕಚೇರಿಗಳಲ್ಲಿ ಯೋಜನೆಯು ಪ್ರಾಯೋಗಿಕವಾಗಿ ಆರಂಭಗೊಳ್ಳಲಿದೆ. ಯೋಜನೆಯು ಇಲ್ಲಿ ಯಶಸ್ವಿಯಾದ ಬಳಿಕ ದೇಶದಾದ್ಯಂತ ಇದನ್ನು ವಿಸ್ತರಿಸಬಹುದು~ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.