ಜೋಗ ಜಲಪಾತ ಪ್ರದೇಶ ಅಭಿವೃದ್ಧಿಗೆ ಕ್ರಮ

7

ಜೋಗ ಜಲಪಾತ ಪ್ರದೇಶ ಅಭಿವೃದ್ಧಿಗೆ ಕ್ರಮ

Published:
Updated:

ಸಿದ್ದಾಪುರ: ನಿರ್ಲಕ್ಷ್ಯಕ್ಕೊಳಗಾಗಿರುವ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಜೋಗ ಜಲಪಾತ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದರು.    ಪಶ್ಚಿಮ ಘಟ್ಟ  ಕಾರ್ಯಪಡೆ, ಅರಣ್ಯ ಇಲಾಖೆ, ಉ.ಕ.ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ತಾಲ್ಲೂಕಿನ ಮಾವಿನಗುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹಿಳಾ ಸತ್ಯಾಗ್ರಹ ಸ್ಮಾರಕ ವನದ ನಾಮಫಲಕ ಅನಾವರಣ, ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಮತ್ತು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.`ಜೋಗ ಅಭಿವೃದ್ಧಿ ಪ್ರಾಧಿಕಾರ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತ ಪ್ರದೇಶವನ್ನು ಅಭಿವೃದ್ಧಿ ಪಡಿಸಿದೆ. ಅದೇ ರೀತಿಯಲ್ಲಿ ಜಲಪಾತದ ಈ ಭಾಗವನ್ನು ಅಭಿವೃದ್ಧಿ ಪಡಿಸಬೇಕಾಗಿದೆ. ತಾವು ಈಶ್ವರಪ್ಪ ಅವರೊಂದಿಗೆ  ಈ ಪ್ರಾಧಿಕಾರದ ಉಪಾಧ್ಯಕ್ಷನಾಗಿದ್ದು, ಆ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಮಾಡುತ್ತೇನೆ~ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಡಾ.ವಾಮನ ಆಚಾರ್ಯ ಮಾತನಾಡಿ, ಪ್ಲಾಸ್ಟಿಕ್ ಉಪಯೋಗವನ್ನು ಜನರು ಬಿಡಬೇಕಾಗಿದೆ. ಪ್ರವಾಸಿ ಕೇಂದ್ರ ಮತ್ತು ದೇವಾಲಯಗಳಲ್ಲಿ ಪ್ಲಾಸ್ಟಿಕ್ ಕಸ ಉಂಟಾಗುವುದನ್ನು ನಿಷೇಧ ಮಾಡಬೇಕು ಎಂದರು.ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ತಾ.ಪಂ.ಅಧ್ಯಕ್ಷೆ ಶಾಂತಿ ಹಸ್ಲರ್, ಉಪಾಧ್ಯಕ್ಷ ಪ್ರಸನ್ನ ಹೆಗಡೆ, ಜಿ.ಪಂ.ಸದಸ್ಯೆ ಕಮಲಾ ನಾಯ್ಕ, ಪ.ಪಂ.ಅಧ್ಯಕ್ಷ ಕೆ.ಜಿ.ನಾಯ್ಕ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಾಂತಕುಮಾರ್ ಉಪಸ್ಥಿತರಿದ್ದರು.

 

ಸುಭಾಷ್‌ಚಂದ್ರನ್ ಮತ್ತಿತರರು ಉಪನ್ಯಾಸ ನೀಡಿದರು. ವರದಾಬಾಯಿ ಪರವಾಗಿ ಅನಿಲ ಜನಾರ್ದನ ಭಟ್ಟ, ಗಂಗಮ್ಮ ಪರವಾಗಿ ಕಮಲಾ ವೆಂ. ಹೆಗಡೆ ಅವರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ ಗಣಪತಿ ಕಟ್ಟಿನಕೆರೆ ಸ್ವಾಗತಿಸಿದರು. ನರೇಂದ್ರ ಹೊಂಡಗಾಶಿ ನಿರೂಪಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry