ಶನಿವಾರ, ಜೂಲೈ 11, 2020
28 °C

ಜೋಷಿ ಸಂಗೀತ ವಿವಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಪಂ. ಭೀಮಸೇನ್ ಜೋಷಿ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ನಗರದಲ್ಲಿ ಸ್ಥಾಪನೆ ಮಾಡುವಂತೆ ಸರಕಾರವನ್ನು ಒತ್ತಾಯಿಸಲು ಮಂಗಳವಾರ ನಗರಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ಸಂಗೀತ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧ ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಮತ್ತು ನಗರಸಭೆಯ ಸರ್ವ ಸದಸ್ಯರ ನಿಯೋಗ ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.ಅಲ್ಲದೆ ಜೋಷಿ ಹುಟ್ಟೂರಿನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿರುವ ಹಿನ್ನೆಲೆಯಲ್ಲಿ, ನಗರಸಭೆಯು ಈ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ, ವಿಶ್ವಮಟ್ಟದಲ್ಲಿ ಭೀಮಸೇನ್ ಜೋಷಿಯವರ ಹೆಸರು ಶಾಶ್ವತವಾಗಿಸುವ ಕೆಲಸ ಕೈಗೊಳ್ಳಬೇಕು ಎಂದು ಸಹ ನಿರ್ಣಯ ಮಾಡಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.