ಜ್ಞಾನ ಆಯೋಗ ಅವಧಿ ವಿಸ್ತರಣೆ

ಬುಧವಾರ, ಮೇ 22, 2019
29 °C

ಜ್ಞಾನ ಆಯೋಗ ಅವಧಿ ವಿಸ್ತರಣೆ

Published:
Updated:

ಬೆಂಗಳೂರು: ಹಿರಿಯ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ನೇತೃತ್ವದ ಕರ್ನಾಟಕ ಜ್ಞಾನ ಆಯೋಗದ ಅವಧಿಯನ್ನು 2013ರ ಜೂನ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಪ್ರಕಟಿಸಿದರು.ಶನಿವಾರ ವಿಧಾನಸೌಧದಲ್ಲಿ ಜ್ಞಾನ ಆಯೋಗದ ಅಧ್ಯಕ್ಷ ಕಸ್ತೂರಿ ರಂಗನ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ಜ್ಞಾನ ಆಯೋಗದ ಅವಧಿ ಅಂತ್ಯವಾಗಿತ್ತು. ಆದರೆ, ರಾಜ್ಯದಲ್ಲಿನ ಶಿಕ್ಷಣ ವ್ಯವಸ್ಥೆ ಮತ್ತು ಉದ್ಯೋಗ ಸೃಷ್ಟಿಯ ವಿಷಯದಲ್ಲಿ ಮಹತ್ತರ ಬದಲಾವಣೆ ಗಳನ್ನು ತರುವ ದೃಷ್ಟಿಯಿಂದ ಆಯೋಗ ಅಗತ್ಯವಿದೆ. ಆದ್ದರಿಂದ ಆಯೋಗದ ಅವಧಿಯನ್ನು ಎರಡು ವರ್ಷಗಳ ಕಾಲ ವಿಸ್ತರಿಸಲಾಗಿದೆ~ ಎಂದು ತಿಳಿಸಿದರು.ಆಯೋಗವು ಈಗಾಗಲೇ ಕೆಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಗಳನ್ನು ಸಲ್ಲಿಸಿದೆ. ಉನ್ನತ ಶಿಕ್ಷಣ ಕ್ಷೇತ್ರದ ಸುಧಾರಣೆಯಲ್ಲಿ ಈ ಶಿಫಾರಸುಗಳು ಮಹತ್ವದ ಪಾತ್ರವನ್ನು ನಿರ್ವಹಿಸಲಿವೆ. ಆದ್ದರಿಂದ ಆಯೋಗದ ಶಿಫಾರ ಸು ಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಆಯೋಗ ಸಲ್ಲಿಸುವ ಎಲ್ಲ ವರದಿಗಳನ್ನೂ ಗಂಭೀರವಾಗಿ ಪರಿಗಣಿಸಲಾಗು ವುದು ಎಂದು ಹೇಳಿದರು.ದಿನಾಂಕಕ್ಕೆ ಕಾತರ: `ಮೆಟ್ರೊ~ ರೈಲು ಸಂಚಾರ ಆರಂಭ ಕುರಿತು ಪ್ರತಿಕ್ರಿಯಿಸಿದ ಅವರು, `ನಮ್ಮ ಮೆಟ್ರೊ ಸಂಚಾರಕ್ಕೆ ರೈಲ್ವೆ ಸುರಕ್ಷತಾ ಮಂಡಳಿಯ ಒಪ್ಪಿಗೆ ದೊರೆತಿದೆ. ಈ ಸಂಬಂಧ ಮಂಡಳಿ ಈಗಾಗಲೇ ಪ್ರಮಾಣಪತ್ರ ನೀಡಿದೆ. ನಗ ರದ ಜನತೆಗೆ ದೀಪಾವಳಿಯ ಕೊಡುಗೆಯಾಗಿ ಮೆಟ್ರೊ ರೈಲು ಸಂಚಾರ ಆರಂಭಿ ಸಲು ಸರ್ಕಾರ ಯೋಚಿಸಿದೆ~ ಎಂದರು.ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಂದಲೇ ರೈಲು ಸಂಚಾರಕ್ಕೆ ಚಾಲನೆ ನೀಡಲು ಸರ್ಕಾರ ತೀರ್ಮಾನಿಸಿದೆ. ಪ್ರಧಾನಿ ಸಮಯ ಕೇಳಿದ್ದು, ಈವರೆಗೂ ಅವರ ಕಾರ್ಯಾಲಯದಿಂದ ಪ್ರತಿಕ್ರಿಯೆ ಬಂದಿಲ್ಲ. ಮೆಟ್ರೊ ರೈಲು ಸಂಚಾರ ಉದ್ಘಾಟನೆಗೆ ಪ್ರಧಾನಿಯವರ ಸಮಯ ನಿಗದಿ ಮಾಡುವ ಸಂಬಂಧ ಹಿರಿಯ ಸಚಿವರೊಬ್ಬರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು. ಗಂಭೀರ ಪರಿಗಣನೆ: ಎಸ್‌ಎಸ್‌ಎಲ್‌ಸಿ ತನಕ ಕನ್ನಡ ಮಾಧ್ಯಮ ಶಿಕ್ಷಣ ಕಡ್ಡಾಯ ಮತ್ತು ಕನ್ನಡ ತಂತ್ರಾಂಶ ಅಭಿವೃದ್ಧಿ ಬಗ್ಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಹೇಳಿಕೆ ಬಗ್ಗೆ ಗಮನ ಸೆಳೆದಾಗ, `ಕಂಬಾರರು ನೀಡಿದ ಎಲ್ಲ ಸಲಹೆಗಳನ್ನೂ ಸರ್ಕಾರ ಗಂಭೀರವಾಗಿಯೇ ಪರಿಗಣಿಸುತ್ತದೆ. ಆಡಳಿತಾತ್ಮಕ ಅವಕಾಶಗಳ ಆಧಾರದಲ್ಲಿ ಅವುಗ ಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸ ಲಾಗುವುದು~ಎಂದು ಅವರು ನುಡಿದರು.`ಕನ್ನಡ ಶಿಕ್ಷಣ ಮಾಧ್ಯಮ ಕಡ್ಡಾಯ ಕುರಿತು ಕಂಬಾರರ ಹೇಳಿಕೆ ಸಕಾಲಿಕವಾಗಿದೆ. ಆದರೆ ಈ ಬಗ್ಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಕನ್ನಡ ತಂತ್ರಾಂಶ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುವುದು~ ಎಂದರು.ಗೆಲುವು ಖಚಿತ: ಕೊಪ್ಪಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಜಯಿಸುವುದು ಖಚಿತ.ಕ್ಷೇತ್ರದ ಅಭಿವೃದ್ಧಿಗಾಗಿ ಜನತೆ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry