ಮಂಗಳವಾರ, ಜನವರಿ 28, 2020
18 °C

ಜ್ಯೋತಿ ಬತ್ತ ಖರೀದಿಗೆ ನಕಾರ: ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |ಹೊನ್ನಾಳಿ: ಎಪಿಎಂಸಿ ಆವರಣದಲ್ಲಿ ತೆರೆದಿರುವ ಬತ್ತ ಖರೀದಿ ಕೇಂದ್ರದಲ್ಲಿ ಜ್ಯೋತಿಬತ್ತ ಖರೀದಿಸದ ಕಾರಣ ರೈತರಿಗೆ ತೀವ್ರ ತೊಂದರೆಯಾಗಿದೆ ಎಂದು ರೈತ ಸಂಘದ ಕಾರ್ಯದರ್ಶಿ ಉಮೇಶ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದರು.ತಾಲ್ಲೂಕಿನಲ್ಲಿ ಬಗರ್‌ಹುಕುಂ ಸಾಗುವಳಿದಾರರ ಸಮಿತಿ ರಚನೆಗೊಂಡು ತಿಂಗಳುಗಳೇ ಕಳೆದಿವೆ. ಆದರೂ ಈವರೆಗೂ ಸಮಿತಿ ಸಭೆ ಸೇರಿ ಸಾಗುವಳಿ ಚೀಟಿ ನೀಡಲು ಮುಂದಾಗದಿರುವುದರಿಂದ ರೈತರು ಭ್ರಮನಿರಸನಗೊಂಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಹಸಿರು ಸೇನೆ ಅಧ್ಯಕ್ಷ ಭರ್ಮಪ್ಪ ಮಾಸಡಿ ಮಾತನಾಡಿ, ಭದ್ರಾ ನಾಲೆಯಲ್ಲಿ ಈವರೆಗೂ ನೀರು ಹರಿಸದ ಕಾರಣ ಈ ಭಾಗದ ರೈತರು ಬತ್ತ ನಾಟಿ ಮಾಡಲಾಗದೇ ಚಿಂತಿತರಾಗಿದ್ದಾರೆ. ಕೆಲ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ರೈತರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಬತ್ತ ನಾಟಿ ಮಾಡುವ ಸಮಯದಲ್ಲಿ ನಾಲೆ ಆಧುನೀಕರಣ ಮಾಡುತ್ತಿದ್ದಾರೆ. ಕಳೆದ ನವೆಂಬರ್ 8ರಂದು ನೀರು ಹರಿಸುವುದನ್ನು ನಿಲ್ಲಿಸಲಾಗಿತ್ತು. ನವಂಬರ್‌ನಿಂದ ಜನವರಿ ತಿಂಗಳವರೆಗೆ ಆಧುನೀಕರಣ ಮಾಡದ ಗುತ್ತಿಗೆದಾರರು ಈಗ ಕಾಮಗಾರಿಗೆ ಮುಂದಾಗಿದ್ದಾರೆ. ತಕ್ಷಣ ಕಾಮಗಾರಿ ಸ್ಥಗಿತಗೊಳಿಸಿ ನೀರು ಹರಿಸದಿದ್ದರೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅವರು ಎಚ್ಚರಿಸಿದರು.ಒಂದು ವಾರದಲ್ಲಿ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಭರ್ಮಪ್ಪ ಎಚ್ಚರಿಸಿದರು.

ಪ್ರತಿಕ್ರಿಯಿಸಿ (+)