ಜ್ವಾಲಾಮುಖಿ ಭೀತಿ: 600 ಜನರ ಸ್ಥಳಾಂತರ
ಜಕಾರ್ತ (ಡಿಪಿಎ): ಇಂಡೊನೇಷ್ಯಾದ ಸಿಯಾವು ದ್ವೀಪದಲ್ಲಿನ ಮೌಂಟ್ ಕರಾಂಗೆಟಾಂಗ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟವಾಗುವ ಎಚ್ಚರಿಕೆಯ ಹಿನ್ನೆಲೆಯಲ್ಲಿ 600ಕ್ಕೂ ಅಧಿಕ ಜನರನ್ನು ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಪರ್ವತವು ಶುಕ್ರವಾರದಿಂದ ಕಪ್ಪು ಬಣ್ಣದ ಬಿಸಿ ಹೊಗೆ ಮತ್ತು ಶಿಲಾರಸಗಳನ್ನು ಉಗುಳುತ್ತಿದ್ದು, ಯಾವುದೇ ಕ್ಷಣದಲ್ಲಿ ಸ್ಫೋಟಗೊಳ್ಳುವ ಅಪಾಯದ ಎಚ್ಚರಿಕೆಯನ್ನು ನೀಡಲಾಗಿದೆ. ಹೀಗಾಗಿ ಸುರಕ್ಷತಾ ದೃಷ್ಟಿಯಿಂದ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.