ಸೋಮವಾರ, ಜನವರಿ 20, 2020
26 °C

ಜ. 29ರಂದು ಬಿವಿಎಸ್ ದಶಮಾನೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ಜನವರಿ 29ರ ಭಾನುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಬಹುಜನ ವಿದ್ಯಾರ್ಥಿ ಸಂಘದ ದಶಮಾನೋತ್ಸವ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ ಸುಮಾರು 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಹೊನ್ನೇಗೌಡನಹಳ್ಳಿ ಹನುಮಂತರಾಜು ತಿಳಿಸಿದ್ದಾರೆ.ಈ ಕಾರ್ಯಕ್ರಮಕ್ಕೆ ರಾಜ್ಯದಿಂದ ಸುಮಾರು 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಹಾಗೂ ಬಹುಜನ ವಿದ್ಯಾರ್ಥಿ ಸಂಘ ಸ್ಥಾಪನೆಯಾಗಿ 10 ವರ್ಷಗಳು ಕಳೆದಿದ್ದು, ಈ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ವೈಚಾರಿಕವಾಗಿ, ಸಾಂಸ್ಕೃತಿಕವಾಗಿ ಜಾಗೃತಿಯನ್ನು ಮೂಡಿಸಿ ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಲು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ.

 

ಈ ಸಂತಸದ ಕ್ಷಣವನ್ನು ಹಂಚಿಕೊಳ್ಳಲು ತಾಲ್ಲೂಕಿನ ಬಹುಜನ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಎಲ್ಲ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಪ್ಪದೇ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

 

ಪ್ರತಿಕ್ರಿಯಿಸಿ (+)