ಜ. 5ರಂದು ಜೆಡಿಎಸ್ ರೈತ ಸಮಾವೇಶ

7

ಜ. 5ರಂದು ಜೆಡಿಎಸ್ ರೈತ ಸಮಾವೇಶ

Published:
Updated:

ಹುಬ್ಬಳ್ಳಿ: `ಜೆಡಿಎಸ್ ರೈತರ ಸಮಾವೇಶ ಜನವರಿ 5ರಂದು ಹುಬ್ಬಳ್ಳಿ ಅಥವಾ ವಿಜಾಪುರದಲ್ಲಿ ನಡೆಯಲಿದೆ' ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಶನಿವಾರ ಇಲ್ಲಿ ತಿಳಿಸಿದರು.

ಸಮಾವೇಶ ಸಿದ್ಧತೆ ಕುರಿತು ಚರ್ಚಿಸಲು ಹಮ್ಮಿಕೊಂಡಿದ್ದ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದ ರೈತ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. `ರೈತರ ವಿವಿಧ ಸಮಸ್ಯೆಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರಿಗಾಗಿ ಹಮ್ಮಿಕೊಳ್ಳಬೇಕಾಗಿರುವ ಯೋಜನೆಗಳ ಬಗ್ಗೆ ಸಮಾವೇಶದಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು' ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry