ಟರ್ಮಿನಲ್ ವಿಸ್ತರಣೆ ವರ್ಷದಲ್ಲಿ ಪೂರ್ಣ

7

ಟರ್ಮಿನಲ್ ವಿಸ್ತರಣೆ ವರ್ಷದಲ್ಲಿ ಪೂರ್ಣ

Published:
Updated:

ಬೆಂಗಳೂರು: ಮುಂದಿನ ವರ್ಷ ಮಾರ್ಚ್ ವೇಳೆಗೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಐಎಎಲ್) ಟರ್ಮಿನಲ್ ವಿಸ್ತರಣಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ  ಡಿ.ವಿ.ಸದಾನಂದ ಗೌಡ ತಿಳಿಸಿದರು.ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳ ಜೊತೆ ಗೃಹ ಕಚೇರಿ `ಕೃಷ್ಣಾ~ದಲ್ಲಿ ಶನಿವಾರ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, `ಟರ್ಮಿನಲ್‌ನ ವಿಸ್ತರಣಾ ಕಾರ್ಯವನ್ನು 2013ರ ಮಾರ್ಚ್ ವೇಳೆಗೆ ಪೂರ್ಣಗೊಳಿಸುವ ಭರವಸೆ ಅಧಿಕಾರಿಗಳಿಂದ ದೊರೆತಿದೆ~ ಎಂದರು.ಬಿಐಎಎಲ್ ಅಧಿಕಾರಿಗಳು ಈ ಕುರಿತು ಮುಖ್ಯಮಂತ್ರಿಗಳಿಗೆ ವಿವರ ನೀಡಿದರು. ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡಿದ ಅವರು, ವಿಮಾನ ನಿಲ್ದಾಣದ ವಿಸ್ತರಣಾ ಕಾರ್ಯಕ್ಕೆ ಮುಂದಿನ ಬಜೆಟ್‌ನಲ್ಲಿ ಹಣ ಮೀಸಲಿಡುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.`ಟೋಲ್ ಸಂಗ್ರಹ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿಲ್ಲ. ಅದು ನಮಗೆ ಸಂಬಂಧಿಸಿದ ವಿಷಯವೂ ಅಲ್ಲ~ ಎಂದು ಬಿಐಎಎಲ್ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry