ಟಿಕೆಟ್ ಮಾರಾಟ ಅವ್ಯವಹಾರ ತಡೆಗೆ ಎಚ್ಚರಿಕೆ
ಬೆಂಗಳೂರು: ಭಾರತ ಮತ್ತು ಐರ್ಲೆಂಡ್ ನಡುವೆ ಇದೇ 6ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಕ್ರಿಕೆಟ್ ಪಂದ್ಯದ ಟಿಕೆಟ್ಗಳ ಮಾರಾಟದಲ್ಲಿ ಅವ್ಯವಹಾರ ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ವಿಧಾನ ಸಭೆಯಲ್ಲಿ ತಿಳಿಸಿದರು.
ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ನ ಪಿ.ಎಂ.ಅಶೋಕ್, ಡಾ.ಎಂ.ಸಿ.ಸುಧಾಕರ್, ನೆ.ಲ.ನರೇಂದ್ರಬಾಬು, ಜೆಡಿಎಸ್ನ ವೆಂಕಟರಾವ್ ನಾಡಗೌಡ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಯಾವುದೇ ರೀತಿಯ ಗೊಂದಲ ಆಗದಂತೆ ನೋಡಿಕೊಳ್ಳಲಾಗುವುದು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ಪದಾಧಿಕಾರಿಗಳೊಂದಿಗೆ ಮಾತನಾಡಿ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದರು.
ಶೇ 50ರಷ್ಟು ಟಿಕೆಟ್ಗಳನ್ನು ಸಾರ್ವಜನಿಕರಿಗೆ ನೀಡಬೇಕು. ಲಾಠಿ ಪ್ರಹಾರದಲ್ಲಿ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಕೆಎಸ್ಸಿಎ ಭರಿಸಬೇಕು ಎಂದು ನರೇಂದ್ರ ಬಾಬು ಆಗ್ರಹಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.