ಟಿಪ್ಪು ಹೆಸರಲ್ಲಿ ವಿವಿ ಆರಂಭಕ್ಕೆ ವಿರೋಧ

7

ಟಿಪ್ಪು ಹೆಸರಲ್ಲಿ ವಿವಿ ಆರಂಭಕ್ಕೆ ವಿರೋಧ

Published:
Updated:

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವುದಕ್ಕೆ ಹಿಂದೂಪರ ಸಂಘಟನೆಗಳ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಪಟ್ಟಣದ ಪೂರ್ಣಯ್ಯ ಬೀದಿಯಲ್ಲಿರುವ ವ್ಯಾಸರಾಜ ಮಠದಲ್ಲಿ ಭಾನುವಾರ ನಡೆದ ಸಮಾಲೋಚನಾ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳ ಮುಖಂಡರು ಜ.3ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಣಯ ಕೈಗೊಂಡರು.ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ರಾಜ್ಯ ಮುಖಂಡ ವೆಂಕಟರಾಮು, ವಿಧಾನ ಪರಿಷತ್ ಸದಸ್ಯ ಅಶ್ವತ್ಥನಾರಾಯಣ, ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷ ಡಾ. ಭಾನುಪ್ರಕಾಶ್ ಶರ್ಮಾ, ಬಿಜೆಪಿ ಮುಖಂಡರಾದ ಎಂ.ಸಂತೋಷ್, ಜಿ.ಉಮಾಶಂಕರ್ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಬಜರಂಗದಳ ರಾಜ್ಯ ಸಂಚಾಲಕ ಮಂಜುನಾಥ್ ತಿಳಿಸಿದ್ದಾರೆ.ಟಿಪ್ಪು ಸುಲ್ತಾನ್ ವಿವಾದಾತ್ಮಕ ವ್ಯಕ್ತಿ. ಅಲಿಘಡ್ ವಿಶ್ವವಿದ್ಯಾಲಯ ಸ್ಥಾಪನೆಯಿಂದಾಗಿ ದೇಶದಲ್ಲಿ ಆಂತರಿಕ ಗೊಂದಲಗಳು ಉಂಟಾಗಿವೆ. ಸಂಭಾವ್ಯ ವಿದ್ರೋಹ ಕೃತ್ಯಗಳನ್ನು ತಡೆಯಬೇಕಾದರೆ ಧರ್ಮದ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಪ್ರಕ್ರಿಯೆಯನ್ನು ಕೈ ಬಿಡಬೇಕು. ಈ ಸಂಬಂಧ ಡಿ.20ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮೈಸೂರು, ಮಂಡ್ಯ ಜಿಲ್ಲೆಯ ನಾಗರಿಕರ ಸಭೆ ನಡೆಸಿ ಪ್ರತಿಭಟನೆಗೆ ಬೆಂಬಲ ನೀಡುವಂತೆ ಕೋರುತ್ತೇವೆ ಎಂದು ಮಂಜುನಾಥ್ `ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry