ಮಂಗಳವಾರ, ಏಪ್ರಿಲ್ 20, 2021
29 °C

ಟೀಕಾಕಾರರಿಗೆ ಉತ್ತರ ಕೊಡೋಲ್ಲ; ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ಸರ್ಕಾರ ಹಾಗೂ ಸಚಿವರ ಕಾರ್ಯ ವೈಖರಿಯ ಬಗ್ಗೆ ಟೀಕೆ ಮಾಡುವವರಿಗೆ ಉತ್ತರ ಕೊಡುತ್ತ ಕಾಲಹರಣ ಮಾಡುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.ಸಮೀಪದ ಚಂದ್ರವನ ಆಶ್ರಮಕ್ಕೆ ಭಾನುವಾರ ಭೇಟಿ ನೀಡಿ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.ಸೋಮವಾರ ಗುಲ್ಬರ್ಗಾಕ್ಕೆ ತೆರಳುತ್ತಿದ್ದೇನೆ. ನೆರೆ ಹಾವಳಿಯಿಂದ ಮನೆ ಕಳೆದುಕೊಂಡಿರುವ ವಸತಿ ಹೀನರಿಗೆ ಮನೆ ನಿರ್ಮಿಸಿಕೊಡುವ ಕಾರ್ಯ ಭರದಿಂದ ನಡೆಯುತ್ತಿದೆ.ಆ ಸಂಬಂಧ ಅಲ್ಲಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ನೆರೆ ಹಾವಳಿಯಿಂದ ಮನೆ ಕಳೆದುಕೊಂಡಿರುವ ಎಲ್ಲರಿಗೂ ಆದಷ್ಟು ಶೀಘ್ರ ವಸತಿ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.

ಮುಖಂಡರಾದ ರಾಜೇಶ್ ಗುಂಡೂರಾವ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.