ಮಂಗಳವಾರ, ಮೇ 11, 2021
20 °C
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಚ್.ಎಲ್. ದತ್ತು ಸಲಹೆ

ಟೀಕೆಗೆ ಹೆದರಿ ಜಾಮೀನು ನಿರಾಕರಣೆ ಸಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮೇಲಿನ ಹಂತದ ನ್ಯಾಯಾಲಯಗಳ ಟೀಕೆಗೆ ಗುರಿಯಾಗ ಬೇಕಾಗುತ್ತದೆ ಎಂಬ ಆತಂಕದಿಂದ ಅಧೀನ ನ್ಯಾಯಾಲಯಗಳು ಅಪರಾಧ ಪ್ರಕರಣದ ಆರೋಪಿಗಳಿಗೆ ಜಾಮೀನು ನಿರಾಕರಿಸಬಾರದು. ಆರೋಪ ಸಾಬೀತಾದಲ್ಲಿ ಶಿಕ್ಷೆ ವಿಧಿಸಲಾಗುತ್ತದೆ. ಅಲ್ಲಿಯವರೆಗೂ ಆರೋಪಿಯನ್ನು ಜೈಲಿ ನಲ್ಲೇ ಇರಿಸಿಕೊಳ್ಳುವುದು ಸರಿಯಲ್ಲ' ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಚ್.ಎಲ್. ದತ್ತು ಹೇಳಿದರು.`ಅಪರಾಧ ಪ್ರಕರಣಗಳಲ್ಲಿ ನ್ಯಾಯ ದಾನ ಪ್ರಕ್ರಿಯೆಯಲ್ಲಿ ಸವಾಲುಗಳು' ಕುರಿತು ಕರ್ನಾಟಕ ನ್ಯಾಯಾಂಗ ಅಕಾಡೆಮಿ, ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿ ಮತ್ತು ರಾಜ್ಯ ಹೈಕೋರ್ಟ್ ಜಂಟಿಯಾಗಿ ಆಯೋಜಿಸಿರುವ ದಕ್ಷಿಣ ಭಾರತ ಮಟ್ಟದ ಸಮಾವೇಶವನ್ನು ಬೆಂಗಳೂರಿನಲ್ಲಿ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.ಅಪರಾಧ ಪ್ರಕರಣಗಳು ಹೆಚ್ಚುತ್ತಿ ರುವ ನಗರಗಳ ಪೈಕಿ ರಾಷ್ಟ್ರದಲ್ಲಿ ಬೆಂಗಳೂರಿಗೆ ಎರಡನೆಯ ಸ್ಥಾನ ಇದೆ. ಆದರೆ ಆರೋಪಿಗಳಿಗೆ ಶಿಕ್ಷೆಯಾಗು ತ್ತಿರುವ ಪ್ರಮಾಣ ಕಡಿಮೆ. ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವುದು ಸಮಾಜದ ಅಭಿವೃದ್ಧಿಗೆ ಪೂರಕ ಎಂದರು.ಅಧೀನ ನ್ಯಾಯಾಲಯಗಳ ನ್ಯಾಯಾ ಧೀಶರು ಪುಟಗಟ್ಟಲೆ ಆದೇಶ ಬರೆ ಯುವುದನ್ನು ಹಲವು ಬಾರಿ ನೋಡಿದ್ದೇವೆ. ಹೈಕೋರ್ಟ್, ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಸೂಕ್ತ ರೀತಿ ಯಲ್ಲಿ ವ್ಯಾಖ್ಯಾನಿಸಿ, ತಮ್ಮದೇ ಆದ ರೀತಿ ಯಲ್ಲಿ ಸರಳವಾಗಿ ಆದೇಶ ಬರೆಯುವುದು ಉತ್ತಮ ಎಂದು ಕಿವಿಮಾತು ಹೇಳಿದರು.`ಸಂವಿಧಾನದ ಆಶಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಆದೇಶ, ತೀರ್ಪು ಬರೆಯಬೇಕು. ಜನತೆಗೆ ನ್ಯಾಯ ದೊರೆತಾಗಲೇ ಕಾನೂನಿನ ಉದ್ದೇಶ ಈಡೇರಿದಂತೆ ಆಗುತ್ತದೆ' ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಹೇಳಿದರು.`ನ್ಯಾಯಾಂಗ ವ್ಯವಸ್ಥೆ ಸರಿಯಾಗಿದ್ದರೆ ಇಡೀ ರಾಷ್ಟ್ರ ಸರಿಯಾಗಿರುತ್ತದೆ ಎಂದು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಮಾತನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಕಾನೂನು ಅನುಷ್ಠಾನ ಸರಿಯಾಗಿ ಆಗದಿದ್ದರೆ, ಅದು ಅನೇಕ ಸಮಸ್ಯೆಗಳಿಗೆ ಕಾರಣವಾಗಲಿದೆ' ಎಂದು ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಡಿ.ಎಚ್. ವಘೇಲಾ ಹೇಳಿದರು.ಕರ್ನಾಟಕ ನ್ಯಾಯಾಂಗ ಅಕಾಡೆಮಿ ಅಧ್ಯಕ್ಷ ಎನ್. ಕುಮಾರ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್.ಬಿ. ಸಿನ್ಹಾ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.