ಟೂರ್ನಿಯಿಂದ ಹಿಂದೆ ಸರಿದ ಸೆರೆನಾ

ಸಿನ್ಸಿನಾಟಿ, ಅಮೆರಿಕ (ಎಎಫ್ಪಿ/ ಪಿಟಿಐ): ವಿಶ್ವದ ಅಗ್ರಮಾನ್ಯ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್ ಅವರು ಇಲ್ಲಿ ನಡೆಯುತ್ತಿರುವ ಡಬ್ಲ್ಯುಟಿಎ ಸಿನ್ಸಿನಾಟಿ ಮಾಸ್ಟರ್ಸ್ ಓಪನ್ ಟೆನಿಸ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.
ಭುಜದ ನೋವಿಗೆ ಒಳಗಾಗಿರುವ ಅವರು ಇದರಿಂದ ಇನ್ನೂ ಚೇತರಿಸಿ ಕೊಂಡಿಲ್ಲ. ಈ ಕಾರಣದಿಂದಾಗಿ ಟೂರ್ನಿ ಯಲ್ಲಿ ಆಡದಿರಲು ನಿರ್ಧರಿಸಿದ್ದಾರೆ.
34 ವರ್ಷದ ಸೆರೆನಾ ಟೂರ್ನಿಗೆ ನೇರ ಅರ್ಹತೆ ಗಳಿಸಿದ್ದರಲ್ಲದೆ, ಇಲ್ಲಿ ಅಗ್ರಶ್ರೇಯಾಂಕ ಪಡೆದಿದ್ದರು.
‘ಈ ಬಾರಿಯೂ ಟೂರ್ನಿಯಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವ ಗುರಿ ಹೊಂದಿ ದ್ದೆ. ಆದರೆ ಭುಜದ ನೋವು ದಿನೇ ದಿನೇ ಉಲ್ಬಣಿಸುತ್ತಿದೆ. ಹೀಗಾಗಿ ಅನಿವಾರ್ಯ ವಾಗಿ ಟೂರ್ನಿಯಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದೇನೆ. ಇದರಿಂದ ತುಂಬಾ ಬೇಸರವಾಗಿದೆ’ ಎಂದು ಸೆರೆನಾ ತಿಳಿಸಿದ್ದಾರೆ.
ಸೆರೆನಾ ಟೂರ್ನಿಯಿಂದ ಹಿಂದೆ ಸರಿದಿರುವ ಕಾರಣ ಜರ್ಮನಿಯ ಏಂಜಲಿಕ್ ಕೆರ್ಬರ್ ಅವರ ಪ್ರಶಸ್ತಿಯ ಹಾದಿ ಸುಗಮವಾದಂತಿದೆ.
ಕೆರ್ಬರ್ ಇಲ್ಲಿ ಚಾಂಪಿಯನ್ ಆದರೆ ವಿಶ್ವ ಕ್ರಮಾಂಕಪಟ್ಟಿಯಲ್ಲಿ ಅಗ್ರಸ್ಥಾನ ಕ್ಕೇರುವ ಸಾಧ್ಯತೆಯೂ ಇದೆ.
ಸಾನಿಯಾ–ಸ್ಟ್ರೈಕೋವಾಗೆ ಏಳನೇ ಶ್ರೇಯಾಂಕ: ಭಾರತದ ಸಾನಿಯಾ ಮಿರ್ಜಾ ಮತ್ತು ಜೆಕ್ ಗಣರಾಜ್ಯದ ಬಾರ್ಬೊರ ಸ್ಟ್ರೈಕೋವಾ ಅವರು ಟೂರ್ನಿಯ ಮಹಿಳೆಯರ ಡಬಲ್ಸ್ನಲ್ಲಿ ಏಳನೇ ಶ್ರೇಯಾಂಕ ಗಳಿಸಿದ್ದಾರೆ.
ಸಾನಿಯಾ ಈ ಮೊದಲು ಸ್ಟಿಟ್ಜರ್ಲೆಂಡ್ನ ಮಾರ್ಟಿನಾ ಹಿಂಗಿಸ್ ಜೊತೆಗೂಡಿ ಆಡುತ್ತಿದ್ದರು. ಕೆಲ ದಿನಗಳ ಹಿಂದೆ ಇಬ್ಬರೂ ಈ ವಿಭಾಗದಲ್ಲಿ ಜೊತೆಯಾಗಿ ಮುಂದುವರಿಯದಿರಲು ನಿರ್ಧರಿಸಿದ್ದರು.
ಭಾರತದ ರೋಹನ್ ಬೋಪಣ್ಣ ಮತ್ತು ರುಮೇನಿಯಾದ ಫ್ಲೋರಿನ್ ಮಾರ್ಗಿಯಾ ಅವರು ಡಬಲ್ಸ್ ವಿಭಾಗದಲ್ಲಿ ಸ್ಪರ್ಧಿಸಲಿದ್ದಾರೆ. ಇವರಿಗೆ ಮೊದಲ ಸುತ್ತಿನಲ್ಲಿ ‘ಬೈ’ ಸಿಕ್ಕಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.