ಗುರುವಾರ , ಜೂನ್ 24, 2021
28 °C

ಟೆನಿಸ್: ಕ್ವಾರ್ಟರ್‌ ಫೈನಲ್‌ಗೆ ಸೈನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬರ್ಮಿಂಗ್‌ಹ್ಯಾಮ್‌ (ಪಿಟಿಐ/ ಐಎಎನ್‌ಎಸ್‌): ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ಇಲ್ಲಿ ನಡೆಯುತ್ತಿರುವ ಆಲ್‌ ಇಂಗ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ ಷಿಪ್‌ನ ಮಹಿಳೆಯರ ಸಿಂಗಲ್ಸ್‌ನಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.



ಗುರುವಾರ ರಾತ್ರಿ ನಡೆದ ಎರಡನೇ ಸುತ್ತಿನ ಹಣಾಹಣಿಯಲ್ಲಿ ಏಳನೇ ಶ್ರೇಯಾಂಕ ಪಡೆದಿರುವ ಸೈನಾ 24–22, 18–21, 21–19ರಲ್ಲಿ ಬೆಯಿವೆನ್‌ ಜಾಂಗ್‌ ಅವರನ್ನು ಸೋಲಿಸಿದರು.



ಕಠಿಣ ಪೈಪೋಟಿಯಿಂದ ಕೂಡಿದ್ದ ಪಂದ್ಯದ ಮೊದಲ ಗೇಮ್‌ನಲ್ಲಿ  ಅಮೋಘ ಆಟ ಪ್ರದರ್ಶಿಸಿದ ಸೈನಾ ಗೆಲುವು ಪಡೆದರು. ಅಮೆರಿಕವನ್ನು ಪ್ರತಿನಿಧಿಸುತ್ತಿರುವ ಜಾಂಗ್‌ ಎರಡನೇ ಗೇಮ್‌ನಲ್ಲಿ ಆಕ್ರಮಣಕಾರಿ ಆಟ ತೋರಿದರು. ಅವರು  21–18ರಲ್ಲಿ ಜಯ ಪಡೆದು ಭಾರತದ ಆಟಗಾರ್ತಿ ಗೆ ತಿರುಗೇಟು  ನೀಡಿದರಲ್ಲದೇ, ಪಂದ್ಯದಲ್ಲಿ ಸಮಬಲ ಸಾಧಿಸುವಲ್ಲಿ ಯಶಸ್ವಿಯಾದರು.



ಮೂರನೇ ಹಾಗೂ ನಿರ್ಣಾಯಕ ಗೇಮ್‌ ಅತ್ಯಂತ ರೋಚಕತೆಯಿಂದ ಕೂಡಿತ್ತು. ಗೆಲುವಿಗಾಗಿ ಉಭಯ ಆಟಗಾರ್ತಿಯರು ತೀವ್ರ ಹಣಾಹಣಿ ನಡೆಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.