ಇಂಡಿಯನ್ ವೆಲ್ಸ್, ಅಮೆರಿಕ (ಪಿಟಿಐ): ಲಿಯಾಂಡರ್ ಪೇಸ್ ಮತ್ತು ರಾಡೆಕ್ ಸ್ಟೆಪನೆಕ್ ಜೋಡಿ ಇಲ್ಲಿ ನಡೆಯುತ್ತಿರುವ ಎಟಿಪಿ ಇಂಡಿಯನ್ ವೆಲ್ಸ್ ಮಾಸ್ಟರ್ಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪ್ರವೇಶಿಸಿತು.

ಮಂಗಳವಾರ ನಡೆದ ಪಂದ್ಯದಲ್ಲಿ ಭಾರತ- ಜೆಕ್ ಗಣರಾಜ್ಯದ ಜೋಡಿ 7-6, 6-4 ರಲ್ಲಿ ಜುವಾನ್ ಮೊನಾಕೊ ಮತ್ತು ಕೀ ನಿಶಿಕೊರಿ ವಿರುದ್ಧ ಜಯ ಪಡೆಯಿತು. ಪೇಸ್- ಸ್ಟೆಪನೆಕ್ ಎಂಟರಘಟ್ಟದ ಪಂದ್ಯದಲ್ಲಿ ಸ್ಪೇನ್ನ ರಫೆಲ್ ನಡಾಲ್ ಮತ್ತು ಮಾರ್ಕ್ ಲೋಪೆಜ್ ಅವರ ಸವಾಲನ್ನು ಎದುರಿಸಲಿದ್ದಾರೆ.

ಸಾನಿಯಾ ಮಿರ್ಜಾ ಮತ್ತು ರಷ್ಯಾದ ಎಲೆನಾ ವೆಸ್ನಿನಾ ಮಹಿಳೆಯರ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು. ಮಂಗಳವಾರ ನಡೆದ ಪಂದ್ಯದಲ್ಲಿ ಅವರು 6-1, 3-6, 10-2 ರಲ್ಲಿ ತಿಮಿಯಾ ಬಾಸಿನ್ಸ್ಕಿ- ಆಲ್ಬರ್ಟಾ ಬ್ರಿಯಾಂಟಿ ವಿರುದ್ಧ ಪ್ರಯಾಸದ ಜಯ ಸಾಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.