ಟೆನಿಸ್: ನಿಕ್ಷೇಪ್ ಚಾಂಪಿಯನ್

7

ಟೆನಿಸ್: ನಿಕ್ಷೇಪ್ ಚಾಂಪಿಯನ್

Published:
Updated:

ಬೆಂಗಳೂರು: ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಕರ್ನಾಟಕದ ಬಿ.ಆರ್. ನಿಕ್ಷೇಪ್ ಮುಂಬೈಯಲ್ಲಿ ನಡೆದ ಎಐಟಿಎ ಸೂಪರ್ ಸರಣಿ ಟೆನಿಸ್ ಟೂರ್ನಿಯ ಬಾಲಕರ 14 ವರ್ಷದೊಳಗಿನವರ ವಿಭಾಗದ ಸಿಂಗಲ್ಸ್‌ನಲ್ಲಿ ಚಾಂಪಿಯನ್ ಆದರು.ಫೈನಲ್ ಪಂದ್ಯದಲ್ಲಿ ನಿಕ್ಷೇಪ್ 6-1, 6-1ರಲ್ಲಿ ದೆಹಲಿಯ ಅಲೆಕ್ಸ್ ಸೋಲಂಕಿ ಎದುರು ಜಯ ಸಾಧಿಸಿ ಪ್ರಶಸ್ತಿ ಜಯಿಸಿದರು. ಆದರೆ ಇದೇ ಟೂರ್ನಿಯ 16 ವರ್ಷದೊಳಗಿನವರ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನ ಪಡೆದರು. ಈ ಆಟಗಾರ ಫೈನಲ್‌ನಲ್ಲಿ ಅಗ್ರ ಶ್ರೇಯಾಂಕದ ವಿಷ್ಣು ಪ್ರಸಾದ್ ಎದುರು ಸೋಲು ಕಂಡರು ಎಂದು ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry