ಟೆನಿಸ್: ಪೇಸ್-ಭೂಪತಿಗೆ ಸೋಲು

7

ಟೆನಿಸ್: ಪೇಸ್-ಭೂಪತಿಗೆ ಸೋಲು

Published:
Updated:

ಬೀಜಿಂಗ್ (ಐಎಎನ್‌ಎಸ್):  ಭಾರತದ ಲಿಯಾಂಡರ್ ಪೇಸ್ ಹಾಗೂ ಮಹೇಶ್ ಭೂಪತಿ ಅವರು ಇಲ್ಲಿ ನಡೆಯುತ್ತಿರುವ ಚೀನಾ ಓಪನ್ ಟೆನಿಸ್ ಟೂರ್ನಿಯ ಪುರುಷರ ವಿಭಾಗದ ಡಬಲ್ಸ್‌ನ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸೋಲು ಕಂಡರು.ಶುಕ್ರವಾರ ನಡೆದ ಪಂದ್ಯದಲ್ಲಿ ನಾಲ್ಕನೇ ಶ್ರೇಯಾಂಕದ ಭಾರತದ ಜೋಡಿ 2-6, 3-6ರಲ್ಲಿ ಕ್ರೊಯೇಷಿಯಾದ ಮರಿನ್ ಸಿಲಿಕ್ ಹಾಗೂ ಇವಾನ್ ಜುಬಿಸಿಕ್ ಎದುರು ಸೋಲು ಕಂಡು ಟೂರ್ನಿಯಿಂದ ಹೊರ ಬಿದ್ದರು.

ಎರಡೂ ಸೆಟ್‌ಗಳಲ್ಲಿ ಪ್ರಭಾವಿ ಪ್ರದರ್ಶನ ನೀಡುವಲ್ಲಿ ಭಾರತದ ಆಟಗಾರರು ವಿಫಲರಾದರು. ಇವರು

1997ರಲ್ಲಿ ಇದೇ ಟೂರ್ನಿಯಲ್ಲಿ ಭಾರತದ ಜೋಡಿ ಚಾಂಪಿಯನ್ ಆಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry