ಶನಿವಾರ, ಏಪ್ರಿಲ್ 10, 2021
32 °C

ಟೆನಿಸ್: ಫೈನಲ್‌ಗೆ ನಿಕ್ಷೇಪ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂದೋರ್: ಕರ್ನಾಟಕದ ಬಿ.ಆರ್. ನಿಕ್ಷೇಪ್ ಇಲ್ಲಿ ನಡೆಯುತ್ತಿರುವ ಎಐಟಿಎ ಟೆನಿಸ್ ಟೂರ್ನಿಯ 18 ವರ್ಷದೊಳಗಿನವರ ಬಾಲಕರ ವಿಭಾಗದ ಸಿಂಗಲ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.ಇಂದೋರ್ ಟೆನಿಸ್ ಕ್ಲಬ್‌ನಲ್ಲಿ ಗುರುವಾರ ನಡೆದ ನಾಲ್ಕರ ಘಟ್ಟದ ಪಂದ್ಯದಲ್ಲಿ ನಿಕ್ಷೇಪ್ 6-2, 6-1ರಲ್ಲಿ ನಿಖಿಲೇಶ್ ಕೆ. ಅವರನ್ನು ಸೋಲಿಸಿ ಪ್ರಶಸ್ತಿ ಹತ್ತಿರ ಹೆಜ್ಜೆ ಹಾಕಿದರು.ಇದೇ ವಯೋಮಾನದ ಡಬಲ್ಸ್ ವಿಭಾಗದ ಸೆಮಿಫೈನಲ್‌ನಲ್ಲಿ ರಸ್ವಂತ್ ಜೊತೆಗೂಡಿ ಆಡಿದ ನಿಕ್ಷೇಪ್ 4-1, 4-1ರಲ್ಲಿ ರಾಘವ್-ಯುವರಾಜ್ ಜೋಡಿಯನ್ನು ಮಣಿಸಿ ಅಂತಿಮ ಘಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.