ಸೋಮವಾರ, ಜೂನ್ 14, 2021
24 °C

ಟೆನಿಸ್: ಫೈನಲ್‌ಗೆ ಭೂಪತಿ-ಬೋಪಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ (ಪಿಟಿಐ): ಉತ್ತಮ ಪ್ರದರ್ಶನ ಮುಂದುವರಿಸಿರುವಭಾರತದ ಮಹೇಶ್ ಭೂಪತಿ ಹಾಗೂ ರೋಹನ್ ಬೋಪಣ್ಣ ಇಲ್ಲಿ ನಡೆಯುತ್ತಿರುವ ದುಬೈ ಓಪನ್ ಟೆನಿಸ್ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದಾರೆ.ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ನಾಲ್ಕನೇ ಶ್ರೇಯಾಂಕದ ಭಾರತದ ಜೋಡಿ 7-6, 7-6ರ ನೇರ ಸೆಟ್‌ಗಳಿಂದ ಆಸ್ಟ್ರೇಲಿಯಾದ ಮೈಕಲ್ ಲೊದ್ರಾ ಹಾಗೂ ನಿನಾದ್ ಜಿಮೊಂಜಿಕ್ ಅವರನ್ನು ಮಣಿಸಿತು. ಎರಡೂ ಸೆಟ್‌ಗಳಲ್ಲಿ ಭಾರತದ ಜೋಡಿ ಭಾರಿ ಪ್ರತಿರೋಧ ಎದುರಿಸಿತು. ಆದರೂ ಪಂದ್ಯ ಕೈ ಚೆಲ್ಲದೇ ಪ್ರಶಸ್ತಿ ಸನಿಹ ಹೆಜ್ಜೆ ಹಾಕಿತು.ಈ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸುವ ಹಂತದಲ್ಲಿರುವ ಭಾರತದ ಆಟಗಾರರ ಆತ್ಮವಿಶ್ವಾಸ ಹೆಚ್ಚಾಗಿದೆ. ಏಕೆಂದರೆ ಲಂಡನ್ ಒಲಿಂಪಿಕ್ಸ್ ನೇರ ಅರ್ಹತೆ ಪಡೆಯಲು ಈ ಜೋಡಿ ರ‌್ಯಾಂಕಿಂಗ್‌ನಲ್ಲಿ ಪ್ರಗತಿ ಕಾಣಬೇಕು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.