ಮಂಡ್ಯ: ಅಗ್ರ ಶ್ರೇಯಾಂಕದ ವಿಜಯಂತ್ ಮಲಿಕ್ ಹಾಗೂ ನಾಲ್ಕನೇ ಶ್ರೇಯಾಂಕದ ಸಾಕೇತ್ ಮೈನೇನಿ ಪ್ರೇಮ್ ಶುಗರ್ಸ್ ಐಟಿಎಫ್ ಪುರುಷರ ಟೆನಿಸ್ ಟೂರ್ನಿಯ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಸೆಣಸಾಡಲಿದ್ದಾರೆ.

ಪಿಇಟಿ ಕೋರ್ಟ್ನಲ್ಲಿ ಶುಕ್ರವಾರ ನಡೆದ ಸೆಮಿಫೈನಲ್ನಲ್ಲಿ 95 ನಿಮಿಷ ಹೋರಾಟ ನಡೆಸಿದ ಸಾಕೇತ್ 7-6, 6-3ರಲ್ಲಿ ರಂಜಿತ್ ವಿ. ಮುರುಗೇಶನ್ ಎದುರು ಗೆಲುವು ಪಡೆದರು. ಮೊದಲ ಸೆಟ್ನಲ್ಲಿ ಸಾಕೇತ್ 4-2ರಲ್ಲಿ ಮುನ್ನಡೆ ಸಾಧಿಸಿದ್ದರೂ, ನಂತರ ಪ್ರಬಲ ಪೈಪೋಟಿ ಎದುರಿಸಿದರು. ಒಂದು ಹಂತದಲ್ಲಿ ಇಬ್ಬರೂ ಆಟಗಾರರು 6-6ರಲ್ಲಿ ಸಮಬಲ ಸಾಧಿಸಿದರು. ಕೊನೆಗೆ ಟೈ ಬ್ರೇಕರ್ನಲ್ಲಿ ಸಾಕೇತ್ಗೆ ಗೆಲುವು ಲಭಿಸಿತು.

ಇನ್ನೊಂದು ನಾಲ್ಕರ ಘಟ್ಟದ ಪಂದ್ಯದಲ್ಲಿ ವಿಜಯಂತ್ 6-4, 6-2ರಲ್ಲಿ ಎನ್. ಶ್ರೀರಾಮ್ ಬಾಲಾಜಿ ವಿರುದ್ಧ ಗೆಲುವು ಸಾಧಿಸಿ ಅಂತಿಮ ಘಟ್ಟಕ್ಕೆ ಲಗ್ಗೆ ಇಟ್ಟರು. ಸಿಂಗಲ್ಸ್ನ ಫೈನಲ್ ಪಂದ್ಯ ಶನಿವಾರ ನಡೆಯಲಿದೆ.

ಶ್ರೀರಾಮ್-ಅರುಣ್ ಚಾಂಪಿಯನ್: ಭಾರತದ ಎನ್. ಶ್ರೀರಾಮ್ ಬಾಲಾಜಿ ಹಾಗೂ ಅರುಣ್ ಪ್ರಕಾಶ್ ರಾಜಗೋಪಾಲನ್ ಜೋಡಿ ಡಬಲ್ಸ್ ವಿಭಾಗದಲ್ಲಿ ಚಾಂಪಿಯನ್ ಆಯಿತು. ಫೈನಲ್ ಪಂದ್ಯದಲ್ಲಿ ಈ ಜೋಡಿ 7-5, 6-1ರಲ್ಲಿ ಸಾಕೇತ್-ಚೀನಾದ ಬೊವೆನ್ ಒಯೆಂಗ ಅವರನ್ನು ಮಣಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.