ಬುಧವಾರ, ಏಪ್ರಿಲ್ 21, 2021
25 °C

ಟೆನಿಸ್: ಸಾನಿಯಾಗೆ 73ನೇ ರ್ಯಾಂಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ಮಹಿಳೆಯರ ವಿಭಾಗದ ಸಿಂಗಲ್ಸ್‌ನ ರ್ಯಾಂಕಿಂಗ್ ಪಟ್ಟಿಯಲ್ಲಿ 73ನೇ ಸ್ಥಾನದಲ್ಲಿದ್ದಾರೆ.

ಈ ಮೊದಲು ಸಾನಿಯಾ 90ನೇ ಸ್ಥಾನದಲ್ಲಿದ್ದರು. ಅವರು ಚಾರ್ಲ್‌ಸ್ಟ್‌ನ್‌ನಲ್ಲಿ ನಡೆದ ಡಬ್ಲ್ಯುಟಿಎ ಟೆನಿಸ್ ಟೂರ್ನಿಯ ಸಿಂಗಲ್ಸ್‌ನಲ್ಲಿ ಕ್ವಾರ್ಟರ್‌ಫೈನಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದ್ದರಿಂದಲೇ ಅವರು 17 ಸ್ಥಾನಗಳಲ್ಲಿ ಜಿಗಿತ ಕಂಡು 73ನೇ ಸ್ಥಾನದಲ್ಲಿದ್ದಾರೆ.ಡಬ್ಲ್ಯುಟಿಎ ಟೆನಿಸ್ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಚಾಂಪಿಯನ್ ಆಗಿರುವ ಸಾನಿಯಾ 29 ಸ್ಥಾನ ಗಳಿಸಿ ತಮ್ಮ ಸ್ಥಾನವನ್ನು ಉತ್ತಮ ಪಡಿಸಿಕೊಂಡಿದ್ದಾರೆ.

ಮಾಸ್ಟರ್ಸ್ ಟೆನಿಸ್ ಟೂರ್ನಿಯಲ್ಲಿ ಪ್ರಭಾವಿ ಪ್ರದರ್ಶನ ತೋರಿದ್ದ ಸೋಮ್‌ದೇವ್ ದೇವವರ್ಮನ್ ಪುರುಷರ ವಿಭಾಗದಲ್ಲಿ 72ನೇ ಸ್ಥಾನದಲ್ಲಿದ್ದರು. ಅವರು ಈಗ ಒಂದು ಸ್ಥಾನ ಕುಸಿತ ಕಂಡಿದ್ದಾರೆ.ಲಿಯಾಂಡರ್ ಪೇಸ್ ಹಾಗೂ ಮಹೇಶ್ ಭೂಪತಿ ಅವರ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.