ಸೋಮವಾರ, ನವೆಂಬರ್ 18, 2019
20 °C

ಟೈಲರ್‌ಗಳಿಗೆ ಸರ್ಕಾರದ ಯೋಜನೆ ಮಾಹಿತಿ

Published:
Updated:

ಬೆಂಗಳೂರು: ಕರ್ನಾಟಕ ರಾಜ್ಯ ಟೈಲರ್ಸ್‌ ಅಸೋಸಿಯೇಷನ್ ವತಿಯಿಂದ ನಗರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಿಗೆ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಸಂಘದ ರಾಜ್ಯ ಸಮಿತಿ ಅಧ್ಯಕ್ಷ ಪ್ರವೀಣ್ ಸಾಲ್ಯಾನ್, ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ವಸಂತ, ಬೆಂಗಳೂರು ಜಿಲ್ಲೆ ಉಸ್ತುವಾರಿ ಎಸ್.ಕುಮಾರ್, ಮಾಜಿ ರಾಜ್ಯಸಭೆ ಸದಸ್ಯ ಕೆ.ಟಿ.ಮಂಜುನಾಥ, ಹೆಬ್ಬಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಎಸ್.ರಮೇಶ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಫನಿ  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)