ಟೋಲ್ ಸಂಗ್ರಹಕ್ಕೆ ವಿರೋಧ: ಮ್ಯಾಕ್ಸಿ ಕ್ಯಾಬ್ ಸೇವೆ ಸ್ಥಗಿತ

7

ಟೋಲ್ ಸಂಗ್ರಹಕ್ಕೆ ವಿರೋಧ: ಮ್ಯಾಕ್ಸಿ ಕ್ಯಾಬ್ ಸೇವೆ ಸ್ಥಗಿತ

Published:
Updated:

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಬಿಐಎಎಲ್) ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಟೋಲ್ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಸೋಮವಾರದಿಂದ ಬಿಐಎಎಲ್‌ಗೆ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘವು ತಿಳಿಸಿದೆ.  `ಪ್ರತಿನಿತ್ಯ ಆ ರಸ್ತೆಯಲ್ಲಿ ಸುಮಾರು 9 ಸಾವಿರ ವಾಹನಗಳು 45 ಸಾವಿರ ಬಾರಿ (ಟ್ರಿಪ್) ಸಂಚಾರ ನಡೆಸುತ್ತವೆ. ಪ್ರತಿ ಟ್ರಿಪ್‌ಗೆ ವಾಹನವೊಂದಕ್ಕೆ 25 ರೂಪಾಯಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಆದರೆ, ಷಟ್ಪಥ ರಸ್ತೆಯ ಕಾಮಗಾರಿ ಪೂರ್ಣಗೊಳ್ಳುವುದಕ್ಕೂ ಮುನ್ನವೇ ಟೋಲ್ ಸಂಗ್ರಹಿಸುತ್ತಿರುವುದು ಸರಿಯಲ್ಲ. ಆದ್ದರಿಂದ ಟೋಲ್ ಸಂಗ್ರಹಿಸದಂತೆ ಒತ್ತಾಯಿಸಿ ಸೋಮವಾರ ಬೆಳಿಗ್ಗೆಯಿಂದ ಬಿಐಎಎಲ್‌ಗೆ ಕಾರು ಮತ್ತು ಮ್ಯಾಕ್ಸಿ ಕ್ಯಾಬ್ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು~ ಎಂದು ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಖಪ್ಪ `ಪ್ರಜಾವಾಣಿ~ಗೆ ತಿಳಿಸಿದರು.ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಟೋಲ್ ಸಂಗ್ರಹಿಸದಂತೆ ಆದೇಶಿಸಬೇಕು. ಈ ಬೇಡಿಕೆ ಈಡೇರುವವರೆಗೂ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry