ಟ್ಯಾಂಕರ್ಗಳ ಮೇಲೆ ದಾಳಿ
ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಆಘ್ಫಾನಿಸ್ತಾನದ ನ್ಯಾಟೊ ಪಡೆಗಳಿಗೆ ಇಂಧನ ಕೊಂಡೊಯ್ಯುತ್ತಿದ್ದ ಎರಡು ಟ್ಯಾಂಕರ್ಗಳ ಮೇಲೆ ದಾಳಿ ನಡೆಸಿದ ಶಂಕಿತ ಉಗ್ರರು ಅದಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಬೋಲನ್ ಜಿಲ್ಲೆಯ ಧದರ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೋಟಾರ್ಸೈಕಲ್ನಲ್ಲಿ ಬಂದ ಆರು ಮಂದಿ ಉಗ್ರರು ಟ್ಯಾಂಕರ್ಗಳ ಮೇಲೆ ದಾಳಿ ನಡೆಸಿದರು ಎಂದು ಲೆವೀಸ್ ಸೈನಿಕಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.