ಶನಿವಾರ, ಮೇ 8, 2021
26 °C

ಟ್ಯಾಂಕರ್ ಮೂಲಕ ನೀರು ಪೂರೈಕೆ: ಸಚಿವರ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಬರ ಅಧ್ಯಯನ ತಂಡದ ಅಧ್ಯಕ್ಷ, ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.ಬರ ಪರಿಸ್ಥಿತಿ ಕುರಿತು ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹುಮನಾಬಾದ್ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ದಾಸರವಾಡಿ ಗ್ರಾಮದಲ್ಲಿ ಎಲ್ಲ ಬೋರ್‌ವೆಲ್‌ಗಳು ಹಾಳಾಗಿವೆ. ತೆರೆದ ಬಾವಿ 2 ಕಿ.ಮೀ. ದೂರದಲ್ಲಿದೆ. ಹೀಗಾಗಿ ಗ್ರಾಮಸ್ಥರು ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಶಾಸಕ ರಾಜಶೇಖರ ಪಾಟೀಲ್ ಗಮನಸೆಳೆದರು.ಇಂತಹ ಸಮಸ್ಯೆ ಯಾವುದೇ ಗ್ರಾಮದಲ್ಲಿ ಕಂಡು ಬಂದರೂ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದರು.ಹೋಬಳಿ ಕೇಂದ್ರಗಳಲ್ಲಿ ಏ. 15 ರಿಂದ ಮೇವು ಕೇಂದ್ರಗಳನ್ನು ಆರಂಭಿಸಬೇಕು. ಅದಕ್ಕೆ ಪೂರ್ವಭಾವಿಯಾಗಿ ಮೇವು ದಾಸ್ತಾನು ಮಾಡಿಕೊಳ್ಳಬೇಕು. ಕೆಲಸಕ್ಕಾಗಿ ಅರ್ಜಿ ಸಲ್ಲಿಸಿರುವ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯಡಿ ನಾಳೆಯಿಂದಲೇ ಕೆಲಸ ಕೊಡಬೇಕು ಎಂದು ಸೂಚಿಸಿದರು.ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಗೈರು ಹಾಜರಾದ ಬಗ್ಗೆ ಸಿಟ್ಟಿಗೆದ್ದ ಸಚಿವ ಗೋವಿಂದ ಕಾರಜೋಳ, ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಲು ಸಂಬಂಧಪಟ್ಟವರಿಗೆ ಪತ್ರ ಬರೆಯಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಡಿಯುವ ನೀರಿಗಾಗಿ ಪ್ರತಿ ತಾಲ್ಲೂಕಿಗೆ ಕೇವಲ ರೂ 30 ಲಕ್ಷ ನಿಗದಿಪಡಿಸಬಾರದು. ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಜನಪ್ರತಿನಿಧಿಗಳು ಒತ್ತಾಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.