ಶನಿವಾರ, ಮೇ 8, 2021
22 °C

ಟ್ರಕ್ ಓಡಾಟಕ್ಕೆ ಕಡಿವಾಣ ಹಾಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇತ್ತೀಚಿನ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ಯಾಂಕರುಗಳು ಮತ್ತು ಬೃಹತ್ ವಾಹನಗಳ ಅಪಘಾತಗಳು ಹೆಚ್ಚಾಗುತ್ತಿವೆ. ಹಲವಾರು ಜನರು ಪ್ರಾಣ ಕಳೆದು ಕೊಳ್ಳು ತ್ತಿದ್ದಾರೆ. ರಸ್ತೆಗಳ ಗುಣಮಟ್ಟ ಉತ್ತಮವಾ ಗಿದ್ದರೂ ಅಪಘಾತಗಳು ಕಡಿಮೆಯಾಗಿಲ್ಲ.ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಬೆಳಗಿನ ಜಾವ 3 ರಿಂದ 5ರವರೆಗೆ ಲಾರಿಗಳು ಮತ್ತು ಟ್ರಕ್‌ಗಳ ಸಂಚಾರವನ್ನು ಕಡ್ಡಾಯವಾಗಿ ಸ್ಥಗಿತಗೊಳಿಸುವಂತೆ ಸರ್ಕಾರ 1985ರಲ್ಲಿಯೇ ಕಾನೂನು ಜಾರಿಗೆ ತಂದಿದೆ. ಆದರೆ ಅದು ಸರಿಯಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ. ಹೆಚ್ಚಿನ ಅಪಘಾತಗಳು ಬೆಳಗಿನ ಜಾವದಲ್ಲೇ ಸಂಭವಿಸುತ್ತವೆ. ಈ ಅವಧಿಯಲ್ಲಿ ವಾಹನಗಳ ಓಡಾಟ ನಿಲ್ಲಿಸಿದರೆ ಅಪಘಾತಗಳು ಕಡಿಮೆಯಾಗಬಹುದು. ರಾತ್ರಿ ವೇಳೆ ಸಂಚರಿಸುವ ವಾಹನಗಳನ್ನೂ ತಪಾಸಣೆ ಮಾಡುವ ಅಗತ್ಯವಿದೆ.ನಿಯಮ ಉಲ್ಲಂಘಿಸುವ ವಾಹನಗಳ ಚಾಲಕರು ಮತ್ತು ಮಾಲೀಕರ ಮೇಲೆ ಕಾನೂನು ಕ್ರಮ ಜರುಗಿಸಬೇಕು.ಹೆದ್ದಾರಿಗಳಲ್ಲಿ ಪ್ರತಿ 50 ಕಿ ಮೀ. ಒಂದರಂತೆ ಒಂದು ತುರ್ತು ಅಪಘಾತ ಚಿಕಿತ್ಸಾ ಘಟಕಗಳನ್ನು ಸ್ಥಾಪಿಸುವ ಅಗತ್ಯವಿದೆ. ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಅಸ್ಪತ್ರೆಗೆ ಸಾಗಿಸಲು ಅಂಬುಲೆನ್ಸ್‌ಗಳ ಅಗತ್ಯವಿದೆ. ಖಾಸಗಿ ಸಂಸ್ಥೆಗಳು ನಿರ್ಮಿಸಿದ ಹೆದ್ದಾರಿಗಳಲ್ಲಿ ಅಪಘಾತವಾದರೆ ಗಾಯಾಳುಗಳ ಸ್ಥಿತಿ ಶೋಚನೀಯ. ಇತ್ತೀಚೆಗೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ನಡೆದ ಒಂದು ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ತೀವ್ರವಾಗಿ ಗಾಯಗೊಂಡಳು. ಆಕೆಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಆಗಲಿಲ್ಲ. ಇಂತಹ ಪ್ರಕರಣಗಳನ್ನು ತಡೆಯಲು ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಬೇಕು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.