ಮಂಗಳವಾರ, ಅಕ್ಟೋಬರ್ 22, 2019
26 °C

ಟ್ರಾನ್ಸ್‌ಫಾರ್ಮರ್ ಸ್ಥಳಾಂತರಿಸಲಿ

Published:
Updated:

ಬೆಂಗಳೂರು ನಗರ ಮಾಗಡಿ ಮುಖ್ಯ ರಸ್ತೆ ಪ್ರಸನ್ನ ಚಿತ್ರಮಂದಿರ ಮತ್ತು ಮಾಗಡಿ ರಸ್ತೆಯ ಪೊಲೀಸ್ ಠಾಣೆ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ಬೆಸ್ಕಾಂನ ದೊಡ್ಡದಾದ ಟ್ರಾನ್ಸ್‌ಫಾರ್ಮರ್ ಬಾಕ್ಸ್ ಇಟ್ಟಿದ್ದು, ಇದರಿಂದಾಗಿ ಪಾದಚಾರಿಗಳು ಫುಟ್‌ಪಾತ್ ಬದಲಾಗಿ ರಸ್ತೆಯಲ್ಲೇ ನಡೆದಾಡಬೇಕಾಗಿದೆ.ಈ ರಸ್ತೆ ಪ್ರಮುಖ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿದ್ದು, ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಒಂದೆಡೆ ಕಿರಿದಾದ ರಸ್ತೆಯಾದರೆ ಮತ್ತೊಂದೆಡೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇದರಿಂದಾಗಿ ಪಾದಚಾರಿಗಳು ವಾಹನ ಚಾಲಕರೊಂದಿಗೆ ಸಂಘರ್ಷ ಉಂಟಾಗುತ್ತದೆ ಮತ್ತು ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಿರುತ್ತವೆ.ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಈ ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಆವರಿಸಿಕೊಂಡಿರುವ ಟ್ರಾನ್ಸ್‌ಫಾರ್ಮರ್‌ನ್ನು ಸ್ಥಳಾಂತರಿಸಲಿ ಎಂದು ಮನವಿ ಮಾಡಿಕೊಳ್ಳುತ್ತೇನೆ.

-

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)